ಬ್ರೇಕಿಂಗ್ ನ್ಯೂಸ್
07-06-25 12:08 pm Mangalore Correspondent ಕರಾವಳಿ
ಉಳ್ಳಾಲ, ಜೂ.7 : ಮನೆ ಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಉಂಟಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ವೈದ್ಯನಾಥ ನಗರದ ಸುಶೀಲ ಮಡಿವಾಳ ಎಂಬವರ ಮನೆಯಲ್ಲಿ ರಾತ್ರಿ ಸುಮಾರು 10.30 ರ ವೇಳೆ ದುರ್ಘಟನೆ ಸಂಭವಿಸಿದೆ. ಸುಶೀಲಾ ಅವರ ಸಹೋದರನ ಮಗಳ ಮದುವೆಯ ಪ್ರಯುಕ್ತ ಮನೆ ಮಂದಿ ಮೆಹಂದಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ರಾತ್ರಿಯ ವೇಳೆ ಮನೆಯ ಹಂಚಿನ ಮೇಲ್ಛಾವಣಿಯಲ್ಲಿ ಬೆಂಕಿ ಕಾಣಿಸಿದ್ದನ್ನ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿ ಸುಶೀಲ ಅವರಿಗೆ ಕರೆ ಮಾಡಿ ಹೇಳಿದ್ದಾರೆ.




ಮೆಹೆಂದಿ ಕಾರ್ಯಕ್ರಮದಿಂದ ಸುಶೀಲ ಅವರ ಅಳಿಯ ಓಡಿ ಬಂದು ನೋಡಿದಾಗ ಮನೆಯ ಒಂದು ಕೊಠಡಿಯ ಮೇಲ್ಛಾವಣಿಯಲ್ಲಿ ಬೆಂಕಿ ಉರಿಯುತ್ತಿತ್ತು. ಕೂಡಲೇ ವಿದ್ಯುತ್ ಸಂಪರ್ಕದ ಮೈನ್ ಸ್ವಿಚ್ ಬಂದ್ ಮಾಡಲಾಗಿತ್ತು. ಸ್ಥಳೀಯರು ಸೇರಿ ಮನೆಯ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟರೂ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಉರಿದು ಹೋಗಿದೆ.
ಘಟನೆ ಸಂದರ್ಭದಲ್ಲಿ ಯುವಕನೋರ್ವ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ಎಸೆದಿದ್ದು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಅಗ್ನಿ ಅವಘಡದಿಂದ ಮನೆಯ ಸೊತ್ತುಗಳು ಉರಿದು ಭಸ್ಮಗೊಂಡಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳವು ರಾತ್ರಿಯೇ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
Mangalore House Gutted in Fire Accident at Derlakatte While Family Attends Mehendi Ceremony.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm