ಬ್ರೇಕಿಂಗ್ ನ್ಯೂಸ್
14-06-25 02:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 14 : ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧಿಸಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ಕಡೆಯಿಂದ ವಿವಿಧ ಮಾದರಿಯ ತನಿಖೆ ನಡೆಸುವ ಬದಲು ನಿವೃತ್ತ ನ್ಯಾಯಾಧೀಶರಿಂದ ಒಂದೇ ರೀತಿಯ ತನಿಖೆ ನಡೆಸಬೇಕು. ಆ ಬಗ್ಗೆ ಶೀಘ್ರದಲ್ಲೇ ವರದಿ ತರಿಸಿಕೊಂಡು ಸಾರ್ವಜನಿಕರು ಮತ್ತು ಕ್ರಿಕೆಟ್ ಪ್ರೇಮಿಗಳಲ್ಲಿ ವಿಶ್ವಾಸ ಮೂಡಿಸಲು ಸರಕಾರ ಕ್ರಮ ವಹಿಸಬೇಕು ಎಂದು ವೀರಪ್ಪ ಮೊಯ್ಲಿ ಸಲಹೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಎರಡು ಪುಟಗಳ ಪತ್ರ ಬರೆದಿರುವ ವೀರಪ್ಪ ಮೊಯ್ಲಿ, ಕಾಲ್ತುಳಿತ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಮೂರು ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಪ್ರಕಟಿಸಿರುವುದು ಸರಿಯಲ್ಲ. ಇದರಿಂದ ಸರಕಾರದ ಆಡಳಿತಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆಗಳಿವೆ. ಹೀಗಾಗಿ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಕಾಲ್ತುಳಿತದ ಆಕಸ್ಮಿಕ ಘಟನೆಯಿಂದಾಗಿ ಅನೇಕ ದಶಕಗಳಿಂದ ಗಳಿಸಿದ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಅಳಿಸಿ ಹಾಕಬಾರದು. ಈ ಬಗ್ಗೆ ವಿಶೇಷ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳುವ ಅನಿವಾರ್ಯತೆಯಿದೆ. ದುರ್ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆಯ ಮೇಲೆ ಕೆಟ್ಟ ಹೆಸರು ಬಂದಿದೆ. ಆ ಕೆಟ್ಟ ಹೆಸರನ್ನು ಅಳಿಸಿ ಹಾಕಬೇಕು ಎಂದು ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ.
ಆರ್ಸಿಬಿ ವಿಜಯೋತ್ಸವವನ್ನು ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ನಡೆದಿದೆ, ಇದು ಸಲ್ಲದು. ಕಾಲ್ತುಳಿತದಲ್ಲಿ ಅಸುನೀಗಿದವರ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳಲ್ಲಿ ವಿಶ್ವಾಸ ಮೂಡಿಸಬೇಕು. ಅಲ್ಲದೆ, ಕ್ರಿಕೆಟ್ ಪ್ರೇಮಿಗಳಲ್ಲಿಯೂ ಸುರಕ್ಷತೆಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ಷಿಪ್ರ ಗತಿಯಲ್ಲಿ ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ವೀರಪ್ಪ ಮೊಯ್ಲಿ ಕೋರಿದ್ದಾರೆ.
ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದು ಮಾತ್ರ ಸಾಕಾಗುವುದಿಲ್ಲ, ಸಂತ್ರಸ್ತರ ಮತ್ತು ಗಾಯಗೊಂಡವರ ಕುಟುಂಬಗಳ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮೊಯ್ಲಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಬೆಂಗಳೂರಿನಿಂದ ಬೇರೆ ಸ್ಥಳಗಳಿಗೆ ಕ್ರಿಕೆಟ್ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಹರಡುತ್ತಿರುವ ಊಹಾಪೋಹಗಳನ್ನು ಅನಾರೋಗ್ಯಕರ ಎಂದು ಬಣ್ಣಿಸಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಯೋಜಿಸುವ ಭರವಸೆ ನೀಡಬೇಕು ಎಂದು ಹೇಳಿದರು.
Stampede Incident Tarnishes Govt’s Image, Hurts Congress Reputation, Former CM Veerappa Moily Urges CM Siddaramaiah for Judicial Probe.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm