ಬ್ರೇಕಿಂಗ್ ನ್ಯೂಸ್
03-07-25 02:33 pm Mangalore Correspondent ಕರಾವಳಿ
ಮಂಗಳೂರು, ಜು.3 : ಹಾಸನದಲ್ಲಿ ಯುವಕ- ಯುವತಿಯರು ಹೃದಯಾಘಾತದಿಂದ ಮೃತಪಟ್ಟ ಸುದ್ದಿಗಳು ವರದಿಯಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ, ದ.ಕ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ವರದಿ ಪ್ರಕಾರ 60 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನ ಹೃದಯಾಘಾತ ಸಾವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 85 ಮಂದಿ ಹೃದಯಾಘಾತಕ್ಕೀಡಾಗಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾಹಿತಿ ಪ್ರಕಾರ, ಜನವರಿಯಿಂದ ಜೂನ್ ವರೆಗೆ ಜಿಲ್ಲೆಯಲ್ಲಿ 380 ಜನರಿಗೆ ಹೃದಯಾಘಾತವಾಗಿದ್ದು, ಇದರಲ್ಲಿ 85 ಮಂದಿ ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ 54 ಪುರುಷರು ಮತ್ತು 31 ಮಹಿಳೆಯರು ಸೇರಿದ್ದಾರೆ.
40 ರಿಂದ 50 ವರ್ಷದ ಒಳಗಿನ 18 ಮಂದಿ, 50 ರಿಂದ 60 ವರ್ಷ ಒಳಗಿನ 18 ಮಂದಿ ಹಾಗೂ 60 ವರ್ಷ ಮೇಲ್ಪಟ್ಟ 45 ಮಂದಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಲ್ಲಿ ತಿಳಿಸಿದ್ದಾರೆ. 20 ರಿಂದ 40 ವರ್ಷ ವಯಸ್ಸಿನ 4 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಆರು ಹೃದಯಾಘಾತ ಪ್ರಕರಣ ವರದಿಯಾಗಿದೆ. ಸದ್ಯ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. 40 ದಿನಗಳಲ್ಲಿ 24 ಜನರಿಗೆ ಹೃದಯಾಘಾತ ಆಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
Following recent reports of young individuals succumbing to heart attacks in Hassan district, the health department has now raised an alert in Dakshina Kannada as well. According to the district health officer, the majority of heart attack-related deaths in Dakshina Kannada over the last six months have occurred among people aged over 60.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm