ಬ್ರೇಕಿಂಗ್ ನ್ಯೂಸ್
05-07-25 02:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ -ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪೋರ್ಚುಗೀಸರು, ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರು ನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ. ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರು ನಾಮಕರಣಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ. ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
As demands intensify to rename Dakshina Kannada district as "Mangaluru," BJP MLA Vedavyas Kamath has extended full support to the cause, stating that the existing name has no cultural or historical connection to Tulu Nadu.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm