ಬ್ರೇಕಿಂಗ್ ನ್ಯೂಸ್
07-07-25 05:02 pm Mangalore Correspondent ಕರಾವಳಿ
ಮಂಗಳೂರು, ಜುಲೈ 7 : ಪ್ರೀತಿಸುತ್ತಿದ್ದ ಯುವತಿ ಕೈಕೊಟ್ಟಳೆಂದು ಸಿಟ್ಟಿನಿಂದ ಆಕೆಯ ಮೇಲೆ ಚಾಕುವಿನಲ್ಲಿ ಹಲ್ಲೆಗೈದು ಬಳಿಕ ಯುವತಿ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫರಂಗಿಪೇಟೆ ಬಳಿಯ ಸುಜೀರು ಎಂಬಲ್ಲಿ ನಡೆದಿದೆ.
ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ ದೀಕ್ಷಿತಾ (26) ಹಾಗೂ ಕೋಡ್ಮಣ್ ಗ್ರಾಮದ ನಿವಾಸಿ ಸುಧೀರ್ (30) ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರ ಮಧ್ಯೆ ಮನಸ್ತಾಪ ಉಂಟಾಗಿತ್ತು. ಆದರೂ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದನ್ನು ಮಾಡುತ್ತಿದ್ದ.


ಸುಧೀರ್ ಇಂದು ಬೆಳಗ್ಗೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದ್ದು ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಿನಲ್ಲಿ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾಳನ್ನು ಸಾಯಿಸಲು ಚುಚ್ಚಿದ್ದಾನೆ. ಆಕೆ ತಪ್ಪಿಸಿಕೊಂಡು ಹೋಗುತ್ತ ಅರ್ಧ ದಾರಿಯಲ್ಲಿ ಬಿದ್ದಾಗ, ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಆರೋಪಿ ಅಲ್ಲಿಂದ ತೆರಳಿದ್ದು ಅದೇ ಪರಿಸರದಲ್ಲಿರುವ ದಿವ್ಯಾಳ ಬಾಡಿಗೆ ಮನೆಗೆ ಹೋಗಿ, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾಬೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳು ಯುವತಿಯನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್ ಗ್ಯಾರೇಜ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
A tragic incident unfolded near Farangipete, Mangalore, where a young man fatally attacked his girlfriend with a knife and later died by suicide at her residence, following an argument over their relationship. The deceased have been identified as Sudhir (30), a resident of Kodman village, and Divya, also known as Deekshita (26), a resident of Farangipete.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm