ಬ್ರೇಕಿಂಗ್ ನ್ಯೂಸ್
13-07-25 10:12 pm Mangalore Correspondent ಕರಾವಳಿ
ಮಂಗಳೂರು, ಜುಲೈ 13 : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್ ಬಸ್ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮುಡಿಪು ಕಂಬಳಪದವಿನಲ್ಲಿ ನಿರ್ಮಾಣಗೊಂಡ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ವಾಹನಗಳಿಂದಾಗುವ ವಾಯುಮಾಲಿನ್ಯ ತಡೆಗಟ್ಟುವುದಕ್ಕೆ ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಇಲೆಕ್ಟ್ರಿಕ್ ಬಸ್ಗಳ ಬಳಕೆಯನ್ನು ಹೆಚ್ಚು ಜನಪ್ರಿಯಗೊಳಿಸುತ್ತಿದೆ. ಅದರಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಕರ್ನಾಟಕಕ್ಕೆ ಒಟ್ಟು 750 ಎಲೆಕ್ಟ್ರಿಕಲ್ ಬಸ್ಗಳು ಮಂಜೂರಾಗಿದ್ದು, ಆ ಪೈಕಿ ಮಂಗಳೂರು ನಗರಕ್ಕೆ 100 ಬಸ್ಗಳನ್ನು ಮಂಜೂರುಗೊಳಿಸಲಾಗಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರ್ಗಿ, ಮೈಸೂರು, ಶಿವಮೊಗ್ಗ ಸೇರಿದಂತೆ ಒಟ್ಟು 10 ನಗರಗಳಿಗೆ ತಲಾ 100 ಎಲೆಕ್ಟ್ರಿಕ್ ಬಸ್ಗಳನ್ನು ಮಂಜೂರು ಮಾಡಲಾಗಿದೆ. ಪರಿಸರ ಸ್ನೇಹಿಯಾದ ಈ ಬಸ್ಗಳು ಶೀಘ್ರದಲ್ಲೇ ಮಂಗಳೂರು ನಗರದ ವಿವಿಧ ರೂಟ್ಗಳಲ್ಲಿ ರಸ್ತೆಗಿಳಿಯಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
ವಿದ್ಯುತ್ ಚಾಲಿತ ಈ ಎಲೆಕ್ಟ್ರಿಕ್ ಬಸ್ಗಳಿಗೆ ಸೂಕ್ತ ಚಾರ್ಜಿಂಗ್ ಸ್ಟೇಷನ್, ಬಸ್ ಡಿಪೋಗಳು ಹಾಗೂ ವಾಹನಗಳ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯದ ಅಗತ್ಯವಿದೆ. ಹೀಗಿರುವಾಗ, ಕೆಎಸ್ಆರ್ಟಿಸಿ ಕೂಡಲೇ ಈ 100 ಎಲೆಕ್ಟ್ರಿಕಲ್ ಬಸ್ಗಳ ನಿರ್ವಹಣೆಗೆ ಮಂಗಳೂರಿನಲ್ಲಿ ಸೂಕ್ತ ಜಾಗ ಗುರುತಿಸಬೇಕಿದೆ. ಇತ್ತೀಚೆಗೆ ನಡೆದಿರುವ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್ಗಳ ನಿರ್ವಹಣೆಗೆ ಜಾಗ ಸೇರಿದಂತೆ ಸೂಕ್ತ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೂ ಸೂಚಿಸಿದ್ದೇನೆ. ಅಲ್ಲದೆ, ಈ ನಿಟ್ಟಿನಲ್ಲಿ ರಾಜ್ಯ ಸಾರಿಗೆ ಇಲಾಖೆಯು ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ಸೂಕ್ತ ಕ್ರಮ ಜರುಗಿಸಬೇಕೆಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಚಿವ ರಾಮಲಿಂಗಾ ರೆಡ್ಡಿ ಅವರಿಗೂ ಇದೇ ಸಂದರ್ಭದಲ್ಲಿ ಕ್ಯಾ. ಚೌಟ ಅವರು ಮನವಿ ಮಾಡಿದ್ದು, ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.
ಕೇಂದ್ರ ಸರ್ಕಾರಕ್ಕೆ ಧನ್ಯವಾದ
ಮಂಗಳೂರಿಗೆ ಕೇಂದ್ರ ಸರ್ಕಾರವು 100 ಬಸ್ಗಳನ್ನು ಮಂಜೂರು ಮಾಡಿರುವುದಕ್ಕೆ ಕ್ಯಾ. ಚೌಟ ಅವರು ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯದ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಇಲಾಖೆ ಅಧಿಕಾರಿಗಳು ಹಾಗೂ ಪರಿಸರ ಸ್ನೇಹಿ ಬಸ್ಗಳ ಸಂಚಾರಕ್ಕೆ ಒತ್ತು ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಕ್ಯಾ. ಚೌಟ ಅವರು ಜಿಲ್ಲೆಯ ಜನರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
In a significant development towards promoting eco-friendly public transport, the Central Government under the leadership of Prime Minister Narendra Modi has approved 100 new electric buses for Mangaluru city under the ‘PM e-Bus Seva Yojana,’ announced Dakshina Kannada MP Capt. Brijesh Chowta.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm