ಬ್ರೇಕಿಂಗ್ ನ್ಯೂಸ್
17-07-25 01:34 pm Mangalore Correspondent ಕರಾವಳಿ
ಮಂಗಳೂರು, ಜುಲೈ 17 : ಕರಾವಳಿಯಲ್ಲಿ ಭಾರೀ ಮಳೆಯಾಗಿದ್ದು, ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ನಾಶ- ನಷ್ಟ ಉಂಟಾಗಿದೆ. ಮಂಗಳೂರು ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನ ಪಕ್ಕದ ಕಂಪೌಂಡ್ ಗೋಡೆ ಕುಸಿದು ಬಿದ್ದು 15ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ.
ಗ್ಯಾರೇಜ್ ರಿಪೇರಿಗೆಂದು ತಂದಿರಿಸಲಾಗಿದ್ದ ದ್ವಿಚಕ್ರ ವಾಹನಗಳನ್ನು ಕಂಪೌಂಡ್ ಗೋಡೆಯ ಉದ್ದಕ್ಕೂ ಇಡಲಾಗಿತ್ತು. ರಾತ್ರಿ ವೇಳೆ ಕಂಪೌಂಡ್ ಗೋಡೆ ಕುಸಿದಿದ್ದು, ಕಲ್ಲು ಮಣ್ಣು ಬೈಕ್, ಸ್ಕೂಟರ್ ಮೇಲೆ ಬಿದ್ದಿದೆ. ಅಲ್ಲಿಯೇ ಪಕ್ಕದಲ್ಲಿ ಇರಿಸಲಾಗಿದ್ದ ಇನ್ನೋವಾ ಕಾರಿಗೂ ಗೋಡೆ ಕುಸಿದು ಬಿದ್ದು ಕಾರಿಗೆ ಹಾನಿಯಾಗಿದೆ.




ಕದ್ರಿ ಬಟ್ಟಗುಡ್ಡೆಯಲ್ಲಿ ಗುಡ್ಡ ಕುಸಿತ
ಇದೇ ವೇಳೆ, ಕದ್ರಿ ಸರ್ಕಿಟ್ ಹೌಸ್ ಬಳಿಯ ಬಿಜೈ ಬಟ್ಟಗುಡ್ಡದಲ್ಲಿ ಮೇಲ್ಭಾಗದ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ರಾತ್ರಿಯೇ ಗುಡ್ಡ ಕುಸಿದಿದ್ದು, ಬೆಳಗ್ಗಿನಿಂದ ಮಣ್ಣು ತೆರವು ಕಾರ್ಯ ಆರಂಭಿಸಿದರೂ ಮಧ್ಯಾಹ್ನ ವರೆಗೆ ತೆರವು ಕಾರ್ಯ ಮುಗಿದಿಲ್ಲ. ಎರಡು ಟಿಪ್ಪರ್, ಒಂದು ಜೆಸಿಬಿ ಮೂಲಕ ಮಣ್ಣು ತೆರವು ಕಾಮಗಾರಿ ಆಗ್ತಿದೆ. ಇದಲ್ಲದೆ, ಕೊಡಿಯಾಲಬೈಲ್, ಮಂಗಳಾದೇವಿ ಸೇರಿದಂತೆ ಹಲವು ಕಡೆಗಳಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಪರದಾಟ ನಡೆಸಿದ್ದಾರೆ.




ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ತಾಲೂಕು ವ್ಯಾಪ್ತಿಯ ಕೌಕ್ರಾಡಿ ಎಂಬಲ್ಲಿ ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಳಗ್ಗಿನಿಂದಲೇ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು, ಮತ್ತಷ್ಟು ಮಣ್ಣು ಕುಸಿತ ಆಗಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಳಿಸಿದ ಪೊಲೀಸರು ವಾಹನಗಳಿಗೆ ಪರ್ಯಾಯ ರಸ್ತೆ ಬಳಸಲು ಸೂಚಿಸಿದ್ದಾರೆ.
ಉಳ್ಳಾಲ ತಾಲೂಕಿನ ಕೋಟೆಕಾರು, ಉಚ್ಚಿಲ, ಉಳ್ಳಾಲ, ಸೋಮೇಶ್ವರ ಭಾಗದಲ್ಲಿ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ರಾತ್ರಿ ವೇಳೆ ಪರದಾಟ ನಡೆಸಿದ್ದಾರೆ. ನಿನ್ನೆ ಸಂಜೆಯಿಂದ ರಾತ್ರಿ ವರೆಗೂ ಮಂಗಳೂರು, ಉಳ್ಳಾಲ, ಮೂಲ್ಕಿ, ಮೂಡುಬಿದ್ರೆ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು ಇದರಿಂದ ಹಲವೆಡೆ ತೊಂದರೆ ಎದುರಾಗಿದೆ.
Mangalore Heavy Rains Cause Widespread Damage in Coastal Karnataka, Landslides, Flooding Disrupt Life. In a major incident, a compound wall collapsed near Vikas College in Maryhill, Mangaluru, damaging over 15 two-wheelers parked alongside the wall. The vehicles, brought to a nearby garage for repairs, were crushed under the debris. A nearby Innova car was also damaged in the collapse.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm