ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm