ಬ್ರೇಕಿಂಗ್ ನ್ಯೂಸ್
24-07-25 05:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಧರ್ಮಸ್ಥಳದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ನಡೆದಿದೆ. ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನ ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ.
2003ರಲ್ಲಿ ನಾಪತ್ತೆಯಾಗಿದ್ದ ಅನನ್ಯ ಭಟ್ ತಾಯಿ ಸುಜಾತಾ ಅವರನ್ನ ಸಂಪರ್ಕಿಸಿ ನ್ಯಾಯಾಲಯದ ಮುಂದಿಟ್ಟು ಅನುಮತಿ ಪಡೆಯುವಂತೆ ಮನವಿ ಮಾಡಿದ್ದಾರೆ.
ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ, 'ಈ ತಜ್ಞರು ತಮ್ಮ ವೈಜ್ಞಾನಿಕ ಜ್ಞಾನ ಹಾಗೂ ಅನುಭವವನ್ನು ಹಂಚಿಕೊಳ್ಳಲು ನಮ್ಮನ್ನು ಸಂಪರ್ಕಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿರುವ ಸ್ಥಳವನ್ನು ಅನಾವರಣಗೊಳಿಸಲು ಮತ್ತು ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆಗಾಗಿ ಅಗತ್ಯವಿರುವ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಸಲಹೆ ನೀಡಲು ಸಿದ್ಧರಾಗಿದ್ದಾರೆ' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ತಜ್ಞರು ಉಲ್ಲೇಖಿಸಿದಂತೆ, ಸಮಾಧಿ ತೆರೆಯುವ ಕಾರ್ಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಪತ್ತೆ ಮಾಡುವುದು, ಶವದ ಗುರುತು ಪತ್ತೆಗೆ ವೈದ್ಯಕೀಯ ಮತ್ತು ಪೋಲಿಸ್ ಅಧಿಕಾರಿಗಳಿಗೆ ಪೂರಕವಾಗಿ ಕೆಲಸ ಮಾಡುವುದಾಗಿ ಮುಂದೆ ಬಂದಿದ್ದಾರೆ. ಎಲ್ಲರ ಸಹಕಾರದಿಂದ ಈ ತನಿಖೆಯನ್ನು ಮಾಡಿದಲ್ಲಿ ಪ್ರಕರಣವನ್ನು ಸತ್ಯದ ಹಾದಿಯತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ. ಲಭ್ಯವಾಗುವಂತೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸುಜಾತಾ ಭಟ್ ಅವರ ಕಾನೂನುಬದ್ಧ ಹಕ್ಕನ್ನು ಗುರುತಿಸಿ, ವಿಶೇಷ ತನಿಖಾ ತಂಡ (SIT) ತಮ್ಮ ವೈಜ್ಞಾನಿಕ ವಿಷಯಗಳ ಸಂಪರ್ಕ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಲು ನಾವು ಆಗ್ರಹಿಸುತ್ತೇವೆ. ಇದರಿಂದ ಈ ತಜ್ಞರು ನೇರವಾಗಿ ಸಂವಹನ ನಡೆಸಲು ಮತ್ತು ತಮ್ಮ ಸೇವೆಗಳನ್ನು ಸ್ವಯಂ ಪ್ರೇರಿತರಾಗಿ ನೀಡಲು ಸಾಧ್ಯವಾಗುತ್ತದೆ. ಈ ರೀತಿಯ ಸಹಯೋಗವು ಸಮಾಧಿ ತೆಗೆಯುವ ಕಾರ್ಯವೈಖರಿಯನ್ನು ಉತ್ತಮಗೊಳಿಸಿ, ಸತ್ಯವನ್ನು ಬಯಲಿಗೆ ತರಲು ಮಹತ್ವದ ಪಾತ್ರ ವಹಿಸುತ್ತದೆ ಎಂದು ವಕೀಲರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಲ್ಲಿಯವರೆಗೆ ತಮ್ಮ ಪರಿಣತಿ ಮತ್ತು ಬೆಂಬಲ ನೀಡಿದ ಎಲ್ಲಾ ತಜ್ಞರಿಗೆ ನಾವು ಹೃತ್ತೂರ್ವಕ ಕೃತಜ್ಞತೆ ಯನ್ನು ಸಲ್ಲಿಸುತ್ತೇವೆ. ಈ ಸಹಕಾರದಿಂದ ತನಿಖೆಗೆ ಮತ್ತಷ್ಟು ಬಲ ದೊರಕಿದ್ದು, ನ್ಯಾಯದ ನಿರೀಕ್ಷೆಯಲ್ಲಿ ಇರುವ ಕುಟುಂಬಗಳಿಗೆ ಪರಿಹಾರ ಮತ್ತು ನೈತಿಕ ಸಮಾಧಾನ ದೊರಕಲು ಸಹಾಯವಾಗಲಿದೆ ಎಂಬ ವಿಶ್ವಾಸವಿದೆ ಎಂದು ವಕೀಲ ಮಂಜುನಾಥ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
A new development has emerged in the mysterious case of a body allegedly buried at Dharmasthala. Several scientists, engineers, and technical experts—both from India and abroad—have voluntarily come forward to assist in the ongoing investigation.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 02:36 pm
Mangalore Correspondent
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm