ಬ್ರೇಕಿಂಗ್ ನ್ಯೂಸ್
31-07-25 09:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಪ್ರತಿನಿಧಿಗಳಿಗಾಗಿ ಜುಲೈ 28ರಿಂದ ತೊಡಗಿ ಆಗಸ್ಟ್ 1ರ ವರೆಗೆ ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ HDR ಬ್ರಾಕಿಥೆರಪಿ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಕಮಾಂಡ್ ಆಸ್ಪತ್ರೆ (ಬೆಂಗಳೂರು), ಐಎನ್ಎಚ್ಎಸ್ ಅಶ್ವಿನಿ (ಮುಂಬೈ), ಕಮಾಂಡ್ ಆಸ್ಪತ್ರೆ (ಲಕ್ಷ್ಮಿ) ಮತ್ತು ಕಮಾಂಡ್ ಆಸ್ಪತ್ರೆ (ಕೋಲ್ಕತ್ತಾ) ದ ವೈದ್ಯಕೀಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಬ್ರಾಕಿಥೆರಪಿ ತಂತ್ರಜ್ಞಾನ ಮತ್ತು ಶಿಕ್ಷಣದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಜರ್ಮನಿಯ ಬಿಇಬಿಐಜಿ ಮೆಡಿಕಲ್ ಸೊಲ್ಯೂಷನ್ಸ್ ಸಂಸ್ಥೆಯ ನಡುವಿನ ತಿಳುವಳಿಕೆ ಒಪ್ಪಂದ (ಎಂಒಯು) ಅನ್ವಯ ಶೈಕ್ಷಣಿಕ ಸಹಯೋಗದಡಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ಅಂಕೋಲಜಿ ಸೆಂಟರ್ ಸಂಕೀರ್ಣ ಬ್ರಾಕಿಥೆರಪಿ ಕಾರ್ಯ ವಿಧಾನಗಳನ್ನು ನಿಯಮಿತವಾಗಿ ನಿರ್ವಹಿಸುವುದರಲ್ಲಿ ಹೆಸರುವಾಸಿಯಾಗಿದೆ. ಅತ್ಯಾಧುನಿಕ ಮೂಲಸೌಕರ್ಯ ಮತ್ತು ಕೌಶಲ್ಯಪೂರ್ಣ ತಂಡದೊಂದಿಗೆ, ಕರಾವಳಿ ಕರ್ನಾಟಕದಲ್ಲಿ ನಿಖರ ರೇಡಿಯೊಥೆರಪಿಗೆ ಪ್ರಮುಖ ಕೇಂದ್ರವಾಗಿ ಗುರುತಿಸಲ್ಪಟ್ಟಿದೆ. ತರಬೇತಿಯಲ್ಲಿ ಪ್ರಾಯೋಗಿಕ ಅವಧಿಗಳು, ಚಿಕಿತ್ಸಾ ಕಾರ್ಯಾಗಾರಗಳು, ಗುಣಮಟ್ಟದ ಭರವಸೆ ಮತ್ತು ಅಂತರಾಷ್ಟ್ರೀಯ ಅತ್ಯುತ್ತಮ ಅಭ್ಯಾಸಗಳಿಗೆ ಒಡ್ಡಿಕೊಳ್ಳುವುದು ಒಳಗೊಂಡಿದೆ. ವಿಕಿರಣ ಆಂಕೋಲಾಜಿ ವಿಭಾಗದ ತಜ್ಞರು ತಾಂತ್ರಿಕ ಸಿಬಂದಿ ಬಳಸಿಕೊಂಡು ಸೆಷನ್ ಗಳನ್ನು ನಡೆಸುತ್ತಿದ್ದಾರೆ.
ಕೆಎಂಸಿ ಮಂಗಳೂರು ಮತ್ತು ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಜಂಟಿ ಉಪಕ್ರಮದಿಂದ ಕಾರ್ಯಕ್ರಮ ನಡೆಸಲಾಗಿದ್ದು ಆಧುನಿಕ ಮಾದರಿಯ ಕ್ಯಾನ್ಸರ್ ಚಿಕಿತ್ಸೆ ಮತ್ತು ಮಾಹಿತಿ ಹಂಚಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
A comprehensive HDR (High Dose Rate) Brachytherapy training program is currently underway at KMC Hospital, Attavar, Mangaluru, from July 28 to August 1. The workshop is specifically designed for representatives of the Armed Forces Medical Services and includes participation from Command Hospital (Bengaluru), INHS Asvini (Mumbai), Command Hospital (Lucknow), and Command Hospital (Kolkata).
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am