ಬ್ರೇಕಿಂಗ್ ನ್ಯೂಸ್
02-08-25 02:31 pm Mangaluru Correspondent ಕರಾವಳಿ
ಬೆಳ್ತಂಗಡಿ, ಆ.2: ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ತೀವ್ರ ಸಂಚಲನ ಎಬ್ಬಿಸಿರುವಾಗಲೇ ದೂರುದಾರ ವ್ಯಕ್ತಿಯನ್ನು ಎಸ್ಐಟಿ ತಂಡದ ಇನ್ಸ್ ಪೆಕ್ಟರ್ ಮಂಜುನಾಥ ಗೌಡ, ದೂರು ಹಿಂಪಡೆಯುವಂತೆ ಬೆದರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುದಾರನ ಪರ ವಕೀಲರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದು, ಅದರ ಪ್ರತಿಯನ್ನು ಮಾಧ್ಯಮಕ್ಕೆ ಹಂಚಿಕೊಂಡಿದೆ.
ಬೆಳ್ತಂಗಡಿ ಎಸ್ಐಟಿ ಕಚೇರಿಯಲ್ಲಿ ಆಗಸ್ಟ್ 1ರಂದು ರಾತ್ರಿ ದೂರುದಾರ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾಗ ಇನ್ಸ್ ಪೆಕ್ಟರ್ ಮಂಜುನಾಥ ಗೌಡ ಬೆದರಿಕೆ ಹಾಕಿದ್ದಾರೆ. ವ್ಯಕ್ತಿಯಿಂದ ಹೇಳಿಕೆ ಪಡೆಯುವಾಗ ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದು, ಈ ವೇಳೆ ಇಷ್ಟೆಲ್ಲ ಕರಾಮತ್ತು ಮಾಡೋ ಬದಲು ದೂರು ಹಿಂಪಡೆಯಬಹುದಲ್ವಾ.. ಏನೂ ಸಿಗದಿದ್ದರೆ ನೋಡೋಣ. ಒದ್ದು ಜೈಲಿಗೆ ಹಾಕಿಸುತ್ತೇನೆ ಎಂದು ಬೆದರಿಸಿದ್ದಾರೆ ಎಂಬುದಾಗಿ ದೂರುದಾರ ವ್ಯಕ್ತಿಯ ಪರ ವಕೀಲರು ಎಸ್ಐಟಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

ಎಸ್ಐಟಿ ತಂಡದಿಂದ ಉತ್ತಮ ರೀತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿರುವಾಗ ಈ ರೀತಿಯ ಬೆಳವಣಿಗೆ ಸಾರ್ವಜನಿಕರಿಗೆ ತಂಡದ ಅಧಿಕಾರಿಗಳ ಬಗ್ಗೆ ಅಪನಂಬಿಕೆ ಮೂಡಿಸುತ್ತದೆ. ತಂಡದಲ್ಲಿ ಇಂತಹ ವ್ಯಕ್ತಿಗಳಿದ್ದಲ್ಲಿ ತನಿಖೆಗೆ ಅಡ್ಡಿಯಾಗಬಹುದು. ಹಾಗಾಗಿ ಅವರನ್ನು ಕೂಡಲೇ ಬದಲಿಸುವಂತೆ ಒತ್ತಾಯಿಸಿ ಎಸ್ಐಟಿ ಮುಖ್ಯಸ್ಥರಿಗೆ ಪತ್ರದಲ್ಲಿ ವಕೀಲರು ಆಗ್ರಹ ಮಾಡಿದ್ದಾರೆ. ವಕೀಲೆ ಅನನ್ಯಾ ಗೌಡ ಹೆಸರಿನಲ್ಲಿ ಎಸ್ಐಟಿ ಮುಖ್ಯಸ್ಥರಿಗೆ ಇಮೇಲ್ ದೂರು ನೀಡಲಾಗಿದೆ. ಮಂಜುನಾಥ ಗೌಡ ಶಿರಸಿ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದು, ಎಸ್ಐಟಿ ತಂಡಕ್ಕೆ ನಿಯೋಜನೆಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್ಐಟಿ ತಂಡದ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
In a fresh twist to the sensational Dharmasthala human remains case, allegations have surfaced against SIT Inspector Manjunath Gowda for allegedly threatening the complainant to withdraw the case. A formal complaint in this regard has been submitted by the complainant’s legal team to SIT Chief Pranav Mohanty via email, with copies also shared with the media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm