ಬ್ರೇಕಿಂಗ್ ನ್ಯೂಸ್
24-12-20 05:10 pm Mangalore Correspondent ಕರಾವಳಿ
ಮಂಗಳೂರು, ಡಿ.24 : ನಗರದ ಎಲ್ಲೆಂದರಲ್ಲಿ ಕಾಮಗಾರಿ ನಡೆಸುತ್ತಾ ನಿತ್ಯ ಸಂಚಾರಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ.
ಕಾಮಗಾರಿ ತಾತ್ಕಾಲಿಕ ನಿಲ್ಲಿಸುವ ಕುರಿತಾಗಿ ಪಾಲಿಕೆ ಆಯುಕ್ತ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ನಿರ್ಮಾಣ ಹಾಗೂ ನೆಲಸಮ ತ್ಯಾಜ್ಯ ನಿರ್ವಹಣೆ- 2016ರ ನಿಯಮಗಳನ್ನು ಅನುಸರಿಸುವ ತನಕ ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿತ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು. ಈ ಸಂಬಂಧ ಆಯಾ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಪಚ್ಚನಾಡಿ, ಮಂದಾರದಲ್ಲಿ ಘನತ್ಯಾಜ್ಯ ಘಟಕದಿಂದ ಉಂಟಾದ ಅನಾಹುತಗಳ ಬಗ್ಗೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾ.ಎ.ಎಸ್.ಓಕಾ ಹಾಗೂ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.

ನ್ಯಾಯಪೀಠ, ಅಕ್ಷಯ್ ಶ್ರೀಧರ್ ಅವರನ್ನು ಪ್ರಶ್ನೋತ್ತರ ವಿಧಾನದಲ್ಲಿ ವಿಚಾರಣೆ ನಡೆಸಿದ್ದು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿಯಮ ಪಾಲಿಸಲಾಗುತ್ತಿದೆಯೇ ಎಂದು ಪ್ರಶ್ನೆ ಮಾಡಿದೆ. ಅಲ್ಲದೆ, ನಿಯಮ ಪಾಲಿಸುತ್ತಿಲ್ಲ ಎಂದಾದರೆ ನಿಯಮಗಳನ್ನು ಪಾಲಿಸುವ ತನಕ ಕಾಮಗಾರಿ ಸ್ಥಗಿತಗೊಳಿಸುತ್ತೀರಾ ಎಂದು ಪ್ರಶ್ನಿಸಿದೆ.
ಇದಕ್ಕೆ ಉತ್ತರಿಸಿದ ಆಯುಕ್ತರು, ಸದ್ರಿ ನಿಯಮಗಳನ್ನು ಪಾಲನೆ ಮಾಡಲಾಗುತ್ತಿಲ್ಲ. 2016ರ ನಿಯಮಗಳನ್ನು ಅನುಸರಿಸುವ ತನಕ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm