ಬ್ರೇಕಿಂಗ್ ನ್ಯೂಸ್
08-08-25 11:10 pm Mangalore Correspondent ಕರಾವಳಿ
ಮಂಗಳೂರು, ಆ 08 : ಕಮಿಷನ್ ರೂಪದಲ್ಲಿ ಕೋಟ್ಯಂತರ ಮೊತ್ತ ಪಡೆದು ಕೋಟ್ಯಾಂತರ ರೂಪಾಯಿ ವಂಚಿಸುತ್ತಿದ್ದ ರೋಶನ್ ಸಲ್ದಾನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಐದು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೋಧ ಕಾರ್ಯ ಆರಂಭಿಸಿದೆ. ಶೋಧದ ಸಂದರ್ಭದಲ್ಲಿ ಡೈರಿ, ಕಾಗದ ಪತ್ರಗಳು ಸೇರಿದಂತೆ ಮಹತ್ವದ ದಾಖಲೆಗಳು ಲಭ್ಯವಾಗಿವೆ.
ಕಂಕನಾಡಿ ಬೊಲ್ಲಗುಡ್ಡದ ಜಾನ್ ಸಲ್ದಾನ ಅವರ ಮಗ ರೋಷನ್ ಸಲ್ದಾನ, ಉದ್ಯಮಿಗಳಿಗೆ ಸಾಲ ಕೊಡಿಸುವ ಆಮಿಷ ಒಡ್ಡಿ ವಂಚನೆ ಮಾಡುತ್ತಿದ್ದ. ಮಂಗಳೂರು ಮತ್ತು ಚಿತ್ರದುರ್ಗದಲ್ಲಿ ದಾಖಲಾದ ದೂರುಗಳ ಆಧಾರದಲ್ಲಿ ಜುಲೈ 17ರಂದು ಆತನ ವೈಭವೋಪೇತ ಬಂಗಲೆ ಮೇಲೆ ದಾಳಿ ನಡೆಸಿದ ನಗರ ಪೊಲೀಸರು ಆತನನ್ನು ಬಂಧಿಸಿದ್ದರು. ನಂತರ ಕಾನೂನು ಜಾರಿ ಏಜೆನ್ಸಿ ಈತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿತ್ತು.
ಕಡಿಮೆ ಬಡ್ಡಿ ದರದಲ್ಲಿ ಕೋಟ್ಯಂತರ ಮೊತ್ತದ ಸಾಲ ಕೊಡಿಸುವುದಾಗಿ ಹೇಳಿ ಕಮಿಷನ್ ಮತ್ತು ಸ್ಟ್ಯಾಂಪ್ ಡ್ಯೂಟಿ ನೆಪದಲ್ಲಿ ಹಲವು ಉದ್ಯಮಿಗಳಿಂದ ಅಂದಾಜು ₹ 39 ಕೋಟಿ ಮೊತ್ತವನ್ನು ರೋಷನ್, ಡಾಫಿ ಮತ್ತು ಇತರರು ಪಡೆದುಕೊಂಡು ವಂಚಿಸಿದ್ದಾರೆ. ಐಶಾರಾಮಿ ಜೀವನ ನಡೆಸುತ್ತಿದ್ದ ರೋಷನ್ ಉದ್ಯಮಿಗಳನ್ನು ಮನೆಗೆ ಕರೆಸಿ ಸತ್ಕರಿಸುತ್ತಿದ್ದ ಎಂದೂ ತಿಳಿದುಬಂದಿತ್ತು.
ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಶೋಧ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬ್ಯಾಂಕ್ ಖಾತೆಯಲ್ಲಿ ₹ 3.75 ಕೋಟಿ ಮೊತ್ತ ಪತ್ತೆಯಾಗಿತ್ತು. *5.75 ಕೋಟಿ ಮೊತ್ತದಲ್ಲಿ ಪತ್ನಿಯ ಹೆಸರಿನಲ್ಲಿ 5 ಮೀನುಗಾರಿಕಾ ಬೋಟ್ಗಳನ್ನು ಖರೀದಿಸಿರುವುದೂ ಪತ್ತೆಯಾಗಿದೆ. ಈ ಬೋಟ್ಗಳನ್ನು ಮುಟ್ಟುಗೋಲು ಹಾಕಲಾಗಿದೆ.
ಮಂಗಳೂರು ಪೊಲೀಸರು ರೋಷನ್ನ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ವಿದೇಶಿ-ದೇಶಿ ಮದ್ಯದ ಬಾಟಲಿಗಳನ್ನು ಒಳಗೊಂಡ ಮಿನಿ ಬಾರ್, ಚಿನ್ನದ ಲೇಪ ಇರುವಂತೆ ಗೋಚರಿಸುವ ಆಸನಗಳು, ಶೋಕಿಗಾಗಿ ಬಳಸಿದ ಬಗೆಬಗೆಯ ನವನವೀನ ಆಲಂಕಾರಿಕ ವಸ್ತುಗಳು ಮತ್ತು ನಿಗೂಢ ಅಡಗುತಾಣವನ್ನು ಪತ್ತೆ ಮಾಡಿದ್ದರು.
667 ಗ್ರಾಂ ಚಿನ್ನದ ಆಭರಣಗಳು, ₹ 2.75 ಕೋಟಿ ಮೊತ್ತದ ವಜ್ರದ ಉಂಗುರ, ₹ 6 ಲಕ್ಷ 72 ಸಾವಿರ ಬೆಲೆಬಾಳುವ ಮದ್ಯವನ್ನೂ ವಶಪಡಿಸಿಕೊಳ್ಳಲಾಗಿತ್ತು. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮದ್ಯದ ದಾಸ್ತಾನು ಇರಿಸಿದ್ದಕ್ಕಾಗಿ ಅಬಕಾರಿ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಮನೆಯನ್ನೇ ಆತ ಹಣಕಾಸು ವ್ಯವಹಾರದ ಅಡ್ಡೆಯನ್ನಾಗಿಸಿಕೊಂಡಿದ್ದ. ಬೆಂಗಳೂರು, ವಿಜಯಪುರ, ತುಮಕೂರು, ಬಾಗಲಕೋಟೆ, ಕೋಲ್ಕತ್ತ, ಗೋವಾ, ಪುಣೆ, ಲಖನೌ, ಸಾಂಗ್ಲಿ ಮುಂತಾದ ಕಡೆಗಳಲ್ಲಿ ಆತ ವಂಚನೆ ಮಾಡಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದರು.
The Enforcement Directorate (ED) has conducted searches at five locations in Mangaluru in connection with the multi-crore fraud case involving Roshan Saldanha, seizing assets worth ₹9.5 crore, including five fishing boats purchased in his wife’s name.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm