Six Arrested, Dharmasthala Incident, Kudla Rampage: ಧರ್ಮಸ್ಥಳದಲ್ಲಿ ಹಲ್ಲೆ ಘಟನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಆರು ಮಂದಿ ಆರೋಪಿಗಳ ದಸ್ತಗಿರಿ 

10-08-25 02:26 pm       Mangalore Correspondent   ಕರಾವಳಿ

ಧರ್ಮಸ್ಥಳ ಪಾಂಗಾಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಬೆಳ್ತಂಗಡಿ, ಆ.10 : ಧರ್ಮಸ್ಥಳ ಪಾಂಗಾಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಧರ್ಮಸ್ಥಳ ನಿವಾಸಿ ಪದ್ಮಪ್ರಸಾದ್ (32), ಧರ್ಮಸ್ಥಳ ನಿವಾಸಿ ಸುಹಾಸ್ (22), ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಧರ್ಮಸ್ಥಳ ನಿವಾಸಿ ಶಶಿಧರ್(30), ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತರು.‌ 

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಲಾಗಿತ್ತು.

Police have arrested six individuals in connection with an incident near Pangala Cross, Dharmasthala, where they allegedly obstructed police from performing their duty. The arrested have been identified as Padmaprasad (32) and Suhas (22) from Dharmasthala, Khalandar Puttumonu (42) from Ujire, Chetan (21) from Kalenja, Shashidhar (30) from Dharmasthala, and Guruprasad (19) from Kalmanka.