ಬ್ರೇಕಿಂಗ್ ನ್ಯೂಸ್
11-08-25 11:38 am Mangalore Correspondent ಕರಾವಳಿ
ಮಂಗಳೂರು, ಆ.11 : ವ್ಯಕ್ತಿಯೊಬ್ಬರು ಬೈಕಿನಲ್ಲಿ ಸಾಗುತ್ತಿದ್ದಾಗ ತಡೆದು ನಿಲ್ಲಿಸಿ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ವಿಚಾರದಲ್ಲಿ ಪ್ರಶ್ನೆ ಮಾಡಿ ತಮ್ಮನ್ನು ಕುಡ್ಲ ರಾಂಪೇಜ್ ಯೂಟ್ಯೂಬ್ ತಂಡದವರೆಂದು ಹೇಳಿಕೊಂಡಿದ್ದು ಆನಂತರ ಹಲ್ಲೆಗೈದಿದ್ದಾರೆಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆ ನಿವಾಸಿ ಹರೀಶ್ ನಾಯ್ಕ (46) ಎಂಬವರು ಆ.6ರಂದು ಮಧ್ಯಾಹ್ನ ಧರ್ಮಸ್ಥಳ ಗ್ರಾಮದ ಪಾಂಗಾಳ ರಸ್ತೆ ಬಳಿ ಮೋಟಾರ್ ಸೈಕಲ್ ನಲ್ಲಿ ಹೋಗುತ್ತಿದ್ದಾಗ, ಅಲ್ಲಿ ವಿಡಿಯೋ ಕ್ಯಾಮರಾ ಹಿಡಿದು ನಿಂತಿದ್ದ ಮೂವರು ವ್ಯಕ್ತಿಗಳು ನಿಲ್ಲಿಸುವಂತೆ ಸೂಚಿಸಿದ್ದರು. ಮೋಟಾರ್ ಸೈಕಲ್ ನಿಲ್ಲಿಸಿ ವಿಚಾರಿಸಿದಾಗ, ತನ್ನನ್ನು ಕುಡ್ಲ ರಾಂ ಪೇಜ್ ಯೂಟ್ಯೂಬರ್ ಎಂದು ಪರಿಚಯಿಸಿಕೊಂಡಿದ್ದು ಧರ್ಮಸ್ಥಳ ಪರಿಸರದಲ್ಲಿ ಹೆಣಗಳನ್ನು ಹೂತಿರುವ ಬಗ್ಗೆ ವಿಚಾರಿಸಿ, ಬಳಿಕ ತಕರಾರು ತೆಗೆದಿದ್ದಾರೆ. ಕುಡ್ಲ ರಾಂಪೇಜ್ ಎಂಬ ಯೂಟ್ಯೂಬರ್ ಹಾಗು ಆತನೊಂದಿಗೆ ಇದ್ದ ಇನ್ನಿಬ್ಬರು ಏಕಾಏಕಿ ತನಗೆ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:50/2025 ಕಲಂ: 126(2),115(2), 352 ಜೊತೆಗೆ 3(5) ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಹಿಮಾನ್ ಕೊಲೆ ; ಮತ್ತೊಬ್ಬ ಆರೋಪಿ ಬಂಧನ
ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧಿಸಿ ಈಗಾಗಲೇ 12 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದು ಆ.10ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ ರಂಜಿತ್ @ ರಂಜು (35) ಎಂಬಾತ ಬಂಧಿತ. ಕೊಲೆ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಸಹಕರಿಸಿದವರು, ಕೊಲೆಗೆ ಸಂಚು ನಡೆಸಿದವರು ಸೇರಿ ಎಲ್ಲರನ್ನೂ ಬಂಧಿಸುತ್ತಿದ್ದಾರೆ.
ಭಾರತೀಯ ಸೇನೆ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಕೋಮು ದ್ವೇಷದ ಪೋಸ್ಟ್
ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ "ಭಾರತೀಯ ಸೇನೆ" ಎಂಬ ಹೆಸರಿನಲ್ಲಿ ಪೇಜನ್ನು ಹೊಂದಿರುವ ವ್ಯಕ್ತಿಯೊಬ್ಬ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗುವಂತೆ ಮತ್ತು ಕೋಮು ಸೌಹಾರ್ದಕ್ಕೆ ದಕ್ಕೆಯಾಗುವಂತೆ, ಸುಳ್ಳು ಸುದ್ದಿ ಪ್ರಸಾರ ಮಾಡಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡುವಂತೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 70/2025 ಕಲಂ: 196(1)(a) 353(2) BNS 2023 ರಂತೆ ಸುಮೋಟೋ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.
A case has been registered at Dharmasthala Police Station after a man alleged that members of the ‘Kudla Rampage’ YouTube team stopped his bike and assaulted him over questions regarding the alleged burial of bodies in Dharmasthala.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm