ಬ್ರೇಕಿಂಗ್ ನ್ಯೂಸ್
13-08-25 01:49 pm Mangalore Correspondent ಕರಾವಳಿ
ಉಳ್ಳಾಲ, ಆ.13 : ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆಯಲ್ಲೇ ನಿರ್ವಾಹಕರೋರ್ವರು ಹಠಾತ್ತನೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರು ಬಳಿ ಇಂದು ಬೆಳಗ್ಗೆ ನಡೆದಿದೆ. ಕುತ್ತಾರು ಪದವು ನಿವಾಸಿ ಸಂತೋಷ್ (40) ಮೃತ ದುರ್ದೈವಿ.
ದೇರಳಕಟ್ಟೆ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬೆಳಗ್ಗಿನ ವೇಳೆ ಶಾಲಾ ವಿದ್ಯಾರ್ಥಿಗಳನ್ನು ಬಸ್ಸಿಗೆ ಹತ್ತಿಸುತ್ತಿರುವಾಗಲೇ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಸಂತೋಷ್ ಅವರನ್ನ ಪಡೀಲಿನ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಂತೋಷ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸಂತೋಷ್ ಅವರು ಕಳೆದ ಹಲವು ವರ್ಷಗಳಿಂದ ನಿಟ್ಟೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ನಿಟ್ಟೆ ಸಂಸ್ಥೆಯು ಕಳೆದ ಕೆಲವು ವರ್ಷಗಳಿಂದ ಸರಕಾರಿ ಶಾಲೆ, ಆಶ್ರಮಗಳಲ್ಲಿ ಕಲಿಯುವ ವಿದ್ಯಾರ್ಥಿಗಳನ್ನು ತಮ್ಮ ಸಂಸ್ಥೆಯ ಬಸ್ಸುಗಳಲ್ಲೇ ಶಾಲೆಗೆ ಬಿಡುವ ಸೇವೆಯನ್ನು ನಡೆಸುತ್ತಿದೆ. ಮಕ್ಕಳನ್ನ ಶಾಲೆಗೆ ಬಿಡುವ ನಿಟ್ಟೆ ಸಂಸ್ಥೆಯ ಬಸ್ಸಿನಲ್ಲೇ ಸಂತೋಷ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತ ಸಂತೋಷ್ ಅವರು ತಾಯಿ, ಪತ್ನಿ , ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.
In a tragic incident this morning near Adyar, a college bus conductor collapsed and died while performing his duties. The deceased has been identified as Santosh (40), a resident of Kuthar Padu. Santosh, employed with Nitte University in Deralakatte, was on duty in one of the institution’s buses, which also transports school students as part of its community service program. While helping students board the bus, Santosh suddenly collapsed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm