ಬ್ರೇಕಿಂಗ್ ನ್ಯೂಸ್
16-08-25 04:45 pm Mangalore Correspondent ಕರಾವಳಿ
ಮಂಗಳೂರು, ಆ.16 : ಧರ್ಮಸ್ಥಳ ಗ್ರಾಮದಲ್ಲಿ 1987ರಿಂದ 2025ರ ವರೆಗೆ 279 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿಯೇ ಮಾಹಿತಿ ಹಕ್ಕಿನಡಿ ತಿಳಿಸಿದೆ. ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ನಡುವೆಯೇ ಗ್ರಾಪಂ ನೀಡಿರುವ ಈ ಮಾಹಿತಿ ವಿವಾದಕ್ಕೆ ಕಾರಣವಾಗಿದೆ.
ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1987 ರಿಂದ 2025ರ ವರೆಗೆ ಅಂದರೆ 38 ವರ್ಷಗಳಲ್ಲಿ 279 ಅನಾಥ ಶವಗಳನ್ನು ಧರ್ಮಸ್ಥಳದಲ್ಲಿ ಹೂಳಲಾಗಿದೆ. ಇದರಲ್ಲಿ ಒಂದು ನವಜಾತ ಶಿಶು, 219 ಪುರುಷರು ಹಾಗೂ 46 ಮಹಿಳೆಯರ ಶವಗಳನ್ನು ಹೂಳಲಾಗಿದೆ ಎಂದು ಹೇಳಿದೆ. ಈ ಪೈಕಿ 14 ಶವಗಳ ಲಿಂಗವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಆರ್ಟಿಐ ಪ್ರಶ್ನೆಗೆ ಈ ಮಾಹಿತಿ ನೀಡಿದೆ. 2003 - 2004, 2006 - 2007 ಮತ್ತು 2014 - 2015 ರಲ್ಲಿ 17 ಅನಾಥ ಶವಗಳನ್ನು ಹೂಳಲಾಗಿತ್ತು. ಕಳೆದ 10 ವರ್ಷಗಳಲ್ಲಿ 101 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಆರ್ಟಿಐನಡಿ ಮಾಹಿತಿ ಕೇಳಿ ವರದಿ ಮಾಡಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆ ಮಾಡಿಸುತ್ತಿದೆ. ಆದರೆ ತನಿಖೆ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್, ಇದರ ಹಿಂದೆ ಷಡ್ಯಂತ್ರ ಇದೆಯೆಂದು ಹೇಳುವ ಮೂಲಕ ಒಟ್ಟು ತನಿಖಾ ಪ್ರಕ್ರಿಯೆಗೆ ಎಳ್ಳುನೀರು ಬಿಡುವ ಯತ್ನ ಮಾಡಿದ್ದಾರೆ. ಇದಲ್ಲದೆ, ಶವಗಳನ್ನು ಹೂತಿದ್ದೇನೆಂದು ಹೇಳಿರುವ ವ್ಯಕ್ತಿ ತೋರಿಸಿದ ಜಾಗದಲ್ಲಿ ಅಗೆದರೂ ಸಾಕ್ಷ್ಯ ಸಿಗದಿರುವುದು ನಾನಾ ರೀತಿಯ ಶಂಕೆಗೆ ಕಾರಣವಾಗಿದೆ.
ಸದ್ಯಕ್ಕೆ, ಪ್ರಕರಣ ಸಂಬಂಧಿಸಿದಂತೆ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಗೆ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿರಾಮ ನೀಡಲಾಗಿತ್ತು. ಶನಿವಾರ, ಭಾನುವಾರವೂ ಶೋಧ ಕಾರ್ಯ ನಡೆಯುವ ಸಾಧ್ಯತೆ ಇಲ್ಲ. ಎಸ್ಐಟಿ ತನಿಖಾ ತಂಡದಿಂದ ಜು.28ರಂದು ಶೋಧ ಕಾರ್ಯ ಆರಂಭಿಸಿದ್ದು ರಜಾ ದಿನಗಳನ್ನು ಹೊರತುಪಡಿಸಿ 15 ದಿನಗಳಲ್ಲಿ 17 ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ವಿಪಕ್ಷಗಳ ಆಗ್ರಹ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ ಸದನದಲ್ಲಿ ಪ್ರಕರಣದ ಕುರಿತು ಉತ್ತರ ನೀಡಲಿದ್ದಾರೆ ಎನ್ನಲಾಗುತ್ತಿದೆ.
Amid ongoing controversy surrounding the alleged burial of hundreds of bodies in Dharmasthala, a Right to Information (RTI) reply from the Dharmasthala Gram Panchayat has confirmed that 279 unclaimed bodies were buried in the area over the past 38 years, from 1987 to 2025.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm