ಬ್ರೇಕಿಂಗ್ ನ್ಯೂಸ್
30-08-25 09:16 pm Udupi Correspondent ಕರಾವಳಿ
ಕುಂದಾಪುರ, ಆ.30: ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ವಿವಾಹಿತ ಮಹಿಳೆಯ ಮೃತದೇಹ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಅವರು ಆ.28ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯನ ಗುಡಿಯಲ್ಲಿ ಕೆಲ ಕಾಲ ಕಳೆದು ಸೌಪರ್ಣಿಕಾ ನದಿಯತ್ತ ತೆರಳಿದ್ದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಸೇರಿದಂತೆ ಎಲ್ಲ ವಸ್ತುಗಳನ್ನು ಕಾರಿನಲ್ಲಿಯೇ ಬಿಟ್ಟು ಹೋಗಿದ್ದು ಶಂಕೆಗೆ ಕಾರಣವಾಗಿತ್ತು.
ಮುಳುಗು ತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ಶೋಧ ನಡೆಸಿದರೂ ಶುಕ್ರವಾರ ಸಂಜೆಯ ತನಕ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇತ್ತ ವಿಷಯ ತಿಳಿದು ಆಕೆಯ ಕುಟುಂಬಸ್ಥರು ಕೂಡ ಕೊಲ್ಲೂರಿಗೆ ಆಗಮಿಸಿದ್ದರು.
ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕದಳ ಶನಿವಾರವೂ ಹುಡುಕಾಟ ನಡೆಸಿತ್ತು. ಹುಡುಕಾಟ ಸಂದರ್ಭದಲ್ಲಿ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಶವ ಪತ್ತೆಯಾಗಿದೆ. ವಸುಧಾ ಅವರು ಈಜು ಪಟುವಾಗಿದ್ದು ವೇಗವಾಗಿ ಹರಿಯುತ್ತಿದ್ದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋಗಿದ್ದರೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ಗೊತ್ತಾಗಿಲ್ಲ. ಸ್ಥಳೀಯರು ನದಿಗೆ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಲ್ಲೂರು ಪೊಲೀಸರು, ಸ್ಥಳೀಯರು ಹುಡುಕಾಟದಲ್ಲಿ ತೊಡಗಿಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
The body of a married woman from Bengaluru, who had gone missing after visiting the Kollur temple, has been found in the Souparnika River near Mavinakaru. The circumstances surrounding her death remain unclear – whether it was a case of suicide or a tragic accident during a ritual bath.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm