ಬ್ರೇಕಿಂಗ್ ನ್ಯೂಸ್
30-08-25 11:01 pm Mangalore Correspondent ಕರಾವಳಿ
ಉಳ್ಳಾಲ, ಆ.30 : ಉಳ್ಳಾಲದಲ್ಲಿ 2002ನೇ ಇಸವಿಯಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲ ಯಶಸ್ಸಿನ ರೂವಾರಿ, ಖ್ಯಾತ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಉಳ್ಳಾಲ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಗೋಪಾಲ ಗೋಳಿಯಡಿ(83)ಯವರು ಅಲ್ಪ ಕಾಲದ ಅಸೌಖ್ಯದಿಂದ ಉಳ್ಳಾಲ ಗೋಳಿಯಡಿಯ ಸ್ವಗೃಹದಲ್ಲಿ ಶನಿವಾರ ನಿಧನರಾದರು.
ಗೋಪಾಲ ಗೋಳಿಯಡಿಯವರು 2002 ನೇ ಇಸವಿಯಲ್ಲಿ ಉಳ್ಳಾಲದಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲದ ಯಶಸ್ವಿಯ ರೂವಾರಿಗಳಾಗಿದ್ದರು. ಉಳ್ಳಾಲದ ಮಲರಾಯ ದೊಂಪದ ಬಲಿ ಉತ್ಸವ, ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಬ್ರಹ್ಮಕಲಶ, ವಿವಿಧ ಕ್ಷೇತ್ರಗಳ ಜೀರ್ಣೋದ್ಧಾರ ಸಮಿತಿ, ಶಾರದೋತ್ಸವ, ಗಣೇಶೋತ್ಸವ, ಊರ ಪರ ಊರಿನ ನಾಗಮಂಡಲ ಸೇವೆಗಳಲ್ಲಿ ಸಕ್ರಿಯರಾಗಿ ತೊಡಗಿಸಿದ್ದರು.
ಉಳ್ಳಾಲದ ಹಿಂದೂ ರುದ್ರಭೂಮಿ ನಿರ್ಮಾಣದ ಪೂರ್ವದಲ್ಲಿ ಅವರು ನೂರಾರು ಶವ ಸಂಸ್ಕಾರ ನಿರ್ವಹಣೆ ನಡೆಸಿದ್ದರು. ಬಿಲ್ಲವರ ಗೋಕರ್ಣನಾಥ ಸಂಘದ ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದು ಆ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಗೋಪಾಲ ಗೋಳಿಯಡಿ ಅವರ ಅಗಲಿಕೆಗೆ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮಧರ್ಶಿಗಳಾದ ದೇವು ಮೂಲ್ಯಣ್ಣ, ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Renowned religious and social leader, Gopal Golyadi (83), who played a pivotal role in the success of the historic Nagamandala held in Ullal in 2002, passed away on Saturday at his residence in Golyadi, Ullal, following a brief illness.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm