ಬ್ರೇಕಿಂಗ್ ನ್ಯೂಸ್
05-09-25 08:12 pm Mangalore Correspondent ಕರಾವಳಿ
ಉಳ್ಳಾಲ, ಸೆ.5 : ಕಳೆದ ಒಂದು ವರುಷದಿಂದ ಹಲವು ಕೋರ್ಟ್ ವಾರೆಂಟ್ ಗಳಿಗೆ ಕ್ಯಾರೇ ಎನ್ನದ ಆಸಾಮಿಯೋರ್ವನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧನ ಪ್ರಕ್ರಿಯೆಯನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ ಆರೋಪಿ ಕಡೆಯವರು ಉಳ್ಳಾಲದ ಭ್ರಷ್ಟ ಪೊಲೀಸರು ಯಾವುದೇ ವಾರೆಂಟ್ ಇಲ್ಲದೆ ವ್ಯಕ್ತಿಯೋರ್ವನನ್ನ ಬಂಧಿಸಿರೋದಾಗಿ ಬಿಂಬಿಸಿ ಜಾಲತಾಣಗಳಲ್ಲಿ ವೀಡಿಯೋ ಹರಿಯಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಜಾಲತಾಣಗಳಲ್ಲಿ ಸುಳ್ಳು ಸಂದೇಶ ಹರಿಯಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಮಹಮ್ಮದ್ ನವಾಝ್ (34) ಬಂಧಿತ ಆರೋಪಿ.
ಆರೋಪಿ ನವಾಝ್ ಈ ಹಿಂದೆ ಬಬ್ಬುಕಟ್ಟೆಯ ಖಾಸಗಿ ಶಾಲೆಯ ಸ್ಕೂಲ್ ಬಸ್ ಚಾಲಕನಾಗಿದ್ದ. ನವಾಝ್ ವಿರುದ್ಧ ಆತನ ಮೊದಲ ಪತ್ನಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ಜೀವನಾಂಶ ನೀಡಬೇಕೆಂದು ದಾವೆ ಹೂಡಿದ್ದರು. ಆದರೆ ಪತ್ನಿಯ ದೂರಿನ ವ್ಯಾಜ್ಯಕ್ಕೆ ಹಾಜರಾಗದೆ ವಿಳಾಸ ಬದಲಿಸಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ನವಾಝ್ ವಿರುದ್ಧ ಕಳೆದ ಒಂದು ವರುಷದಿಂದಲೂ ಕೋರ್ಟ್ ವಾರೆಂಟ್ ಜಾರಿ ಮಾಡುತ್ತಲೇ ಇತ್ತು. ಆದರೆ ನವಾಝ್ ಮಾತ್ರ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದನೆನ್ನಲಾಗಿದೆ. ನ್ಯಾಯಾಲಯವು ಸೆ.2 ರಂದು ನವಾಝ್ ವಿರುದ್ಧ ಮತ್ತೆ ಬಂಧನ ವಾರೆಂಟ್ ಹೊರಡಿಸಿತ್ತು.
ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಪನೀರು ಸಮೀಪದ ಕಾಯರ್ ಪಳಿಕೆ ಎಂಬಲ್ಲಿನ ಮನೆಯೊಂದರಲ್ಲಿ ಆರೋಪಿ ನವಾಝ್ ಇರೋದನ್ನ ಖಚಿತ ಪಡಿಸಿದ ಪೊಲೀಸರು ಇಂದು(ಶುಕ್ರವಾರ) ಮಧ್ಯಾಹ್ನ ಆತನನ್ನ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನ ಬಂಧಿಸಿ ಕರೆದುಕೊಂಡು ಹೋಗುತ್ತಿರುವ ವೇಳೆ ಮನೆಯಲ್ಲಿದ್ದ ನವಾಝ್ ತಾಯಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಯಾಕೆ ಆತನನ್ನ ಬಂಧಿಸುತ್ತಿರೋದಾಗಿ ಪ್ರಶ್ನಿಸಿದ್ದಾರೆ. ಈ ವೇಳೆ ಉಳ್ಳಾಲ ಪೊಲೀಸರು ಆರೋಪಿ ವಿರುದ್ಧ ಬಂಧನ ವಾರೆಂಟ್ ಇರೋದಾಗಿ ಮಹಿಳೆಯಲ್ಲಿ ಸಮಜಾಯಿಷಿ ನೀಡಿದ್ದಾರೆ. ಆದರೂ ಮನೆಮಂದಿ ಆರೋಪಿಯನ್ನ ಪೊಲೀಸರು ಬಂಧಿಸಿ ಕರೆದೊಯ್ಯುವ ದೃಶ್ಯವನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, "ಯಾವುದೇ ವಾರೆಂಟ್ ಇಲ್ಲದೆ ಉಳ್ಳಾಲದ ಭ್ರಷ್ಟ ಪೊಲೀಸರು ನವಾಝ್ ಎಂಬಾತನನ್ನ ಎಳಕೊಂಡು ಹೋಗುತ್ತಿದ್ದಾರೆ" ಎಂದು ಬಿಂಬಿಸಿ ವೀಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು.
ಜಾಲತಾಣದಲ್ಲಿ ಹರಿಯಬಿಟ್ಟ ವಿಡಿಯೋ ವೈರಲ್ ಆಗಿದ್ದು ಸಂದೇಶವನ್ನ ಗಮನಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ರೆಡ್ಡಿ ಗರಂ ಆಗಿದ್ದು ಆರೋಪಿ ವಿರುದ್ಧ ಬಂಧನ ವಾರೆಂಟ್ ಇತ್ತು ಎಂಬ ಕೋರ್ಟ್ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ಜಾಲತಾಣದಲ್ಲಿ ತಪ್ಪು ಸಂದೇಶ ಹರಡಿದ ಕಿಡಿಗೇಡಿಗಳ ವಿರುದ್ಧ ಮತ್ತೊಂದು ಕೇಸು ಜಡಿಯಲು ಸೂಚಿಸಿದ್ದಾರೆ. ಇದೇ ವೇಳೆ, ಆರೋಪಿ ನವಾಜ್ ನನ್ನು ಪೊಲೀಸರು ಫ್ಯಾಮಿಲಿ ಕೋರ್ಟಿಗೆ ಹಾಜರುಪಡಿಸಿದ್ದು ಮೊದಲ ಪತ್ನಿಗೆ ಜೀವನಾಂಶ ನೀಡಬೇಕೆಂಬ ಆದೇಶ ಪಾಲನೆಗೆ ಸೂಚಿಸಿ, ವಾರಂಟ್ ನಿರ್ಲಕ್ಷಿಸಿ ಕೋರ್ಟಿಗೆ ಬಾರದೆ ತಪ್ಪಿಸಿಕೊಂಡಿದ್ದಕ್ಕಾಗಿ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿದೆ.
Ullal Police have arrested Mohammed Nawaz (34), a resident of Mastikatte, who had been evading multiple court-issued arrest warrants for over a year in connection with a maintenance case filed by his first wife. The arrest has triggered a controversy after Nawaz’s family circulated a video on social media claiming that police arrested him without a warrant.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 03:07 pm
Mangalore Correspondent
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
21-10-25 05:12 pm
Mangalore Correspondent
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm