ಬ್ರೇಕಿಂಗ್ ನ್ಯೂಸ್
06-09-25 04:46 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿ ನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ ನಿಲ್ದಾಣ, ಹೀಗೆ ಅನೇಕ ಕಡೆಗಳಿಂದ ದೂರುಗಳು ಬರುತ್ತಿವೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳಲ್ಲಿ ಕಸ ಬಿದ್ದಿದೆ. ಅಲ್ಲಲ್ಲಿ ಬೀದಿ ದೀಪಗಳು ಸುಸ್ಥಿತಿಯಲ್ಲಿಲ್ಲದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು ಇವೆಲ್ಲವನ್ನೂ ಗಂಭೀರವಾಗಿ ಪರಿಗಣಿಸುವಂತೆ ಶಾಸಕರು ಸೂಚನೆ ನೀಡಿದರು. ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಕೂಡಲೇ ಒಂದು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಭಿವೃದ್ಧಿ ದೃಷ್ಟಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಂದಿಲ್ಲ. ಕಳೆದೆರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಕ್ಕೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಪರಿಹಾರ ಧನವೂ ಬಂದಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಆಗಬೇಕಿರುವ ತುರ್ತು ಕಾಮಗಾರಿಗಳು ನಡೆಯುವುದು ಹೇಗೆ? ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದಲ್ಲಿ ವೈಫಲ್ಯ ಅನುಭವಿಸಿದ್ದು ಮಾತ್ರವಲ್ಲದೆ, ನಮ್ಮ ಮಂಗಳೂರನ್ನು ಸಂಪೂರ್ಣ ಕಡೆಗಣಿಸುತ್ತಿದೆ ಎಂದು ಶಾಸಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
Following heavy rains in Mangaluru city, several roads under the Mangaluru City Corporation (MCC) limits have deteriorated severely, prompting MLA Vedavyas Kamath to direct civic officials to take immediate action to repair potholes and address related civic issues.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am