ಬ್ರೇಕಿಂಗ್ ನ್ಯೂಸ್
11-09-25 01:40 pm Mangalore Correspondent ಕರಾವಳಿ
ಪುತ್ತೂರು, ಸೆ.11 : ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕಾರ್ಯಕರ್ತರ ನಡುವಿನ ಅಸಮಾಧಾನ ಮತ್ತೆ ಹೊಗೆಯಾಡಿದೆ. ಪಕ್ಷದಲ್ಲಿ ವಿಲೀನ ಮಾಡಿದರೂ, ಪ್ರಮುಖ ಹುದ್ದೆ ನೀಡದೆ ಸತಾಯಿಸಲಾಗುತ್ತಿದೆ ಎಂಬ ನೋವು ಕಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಪ್ರಮುಖರು ಮತ್ತು ಪುತ್ತಿಲ ಪರಿವಾರ ಟ್ರಸ್ಟ್ ಪ್ರಮುಖರು, ಕಾರ್ಯಕರ್ತರ ಸಭೆ ಪುತ್ತೂರಿನಲ್ಲಿ ನಡೆಯಿತು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಬಿಜೆಪಿ ಪದಾಧಿಕಾರಿಗಳಾಗಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆಯು ಪುತ್ತಿಲ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂದರ್ಭದಲ್ಲಿ ಪಕ್ಷದ ಮತ್ತು ಸಂಘದ ಪ್ರಮುಖ ನಾಯಕರು ಅರುಣ್ ಪುತ್ತಿಲರಿಗೆ ನೀಡಿದ ಭರವಸೆಯನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪಕ್ಷದ ಪದಾಧಿಕಾರಿಗಳು ತಮ್ಮ ಮುಂದಿನ ನಡೆಯ ಬಗ್ಗೆ ಅಭಿಪ್ರಾಯ ಮಂಡಿಸಿದರು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಂಸದರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ನೀಡಿದ ಭರವಸೆ ಈಡೇರಿಸದಿರುವುದು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಕೆರಳಿಸಿದೆ.
ಕೇಸರಿ ಶಾಲನ್ನು ಹಾಕುವ ದೇವ ದುರ್ಲಭ ಕಾರ್ಯಕರ್ತರನ್ನು ಅವಮಾನಿಸಿ ಹೇಳಿಕೆ ನೀಡುವ ಸಂಘ ಮತ್ತು ಪಕ್ಷದ ನಾಯಕರ ನಡೆಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು. ತಕ್ಷಣ ಪಕ್ಷದ ಮತ್ತು ಸಂಘದ ಹಿರಿಯರು ಸಮನ್ವಯ ಸಾಧಿಸಿ ಪರಿಹಾರ ಮಾಡಬೇಕೆಂದು ಈ ಸಭೆಯಲ್ಲಿ ನಿರ್ಣಯಿಸಲಾಯಿತು. ಮುಂದಿನ ಕೆಲಸ ಕಾರ್ಯಗಳ ಬಗ್ಗೆಯೂ ಚರ್ಚೆಗಳು ನಡೆದು ಟ್ರಸ್ಟಿನ ಅಧ್ಯಕ್ಷರು ಮತ್ತು ತಂಡ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ದರಾಗಿರುವುದಾಗಿ ತಿಳಿಸಿದರು. ಸಂಘದ ಶತಾಬ್ದಿಯ ನಿಮಿತ್ತ ನವಂಬರ್ ತಿಂಗಳಿನಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ
ಯಶಸ್ವಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ನಿರ್ಣಯಿಸಲಾಯಿತು.
Fresh dissatisfaction has surfaced between the BJP and Puthila Parivara workers, with party cadres expressing anger over unfulfilled promises and lack of recognition. Although the group merged with the BJP, senior leaders allege that no key positions have been offered, leaving workers frustrated.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am