ಬ್ರೇಕಿಂಗ್ ನ್ಯೂಸ್
12-09-25 12:58 pm Mangalore Correspondent ಕರಾವಳಿ
ಮಂಗಳೂರು, ಸೆ.12 : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ, ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಗುರುತಿಸಿದ್ದು, ಜಿಲ್ಲಾ ಕವಾಯತು ಮೈದಾನದಲ್ಲಿ 32 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 121 ಸಿಬ್ಬಂದಿಗಳಿಗೆ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು. ಅಲ್ಲದೇ ನಗರದ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡಲು ನೆರವಾದ 19 ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳಿಗೆ ಪುರಸ್ಕರಿಸಲಾಯಿತು.
ಕಳೆದ ಮೂರು ತಿಂಗಳ ಅವಧಿಯಲ್ಲಿ ಸಾಕಷ್ಟು ಎಲ್.ಪಿ.ಸಿ ಪ್ರಕರಣಗಳ (Long pending case) ಆರೋಪಿಗಳನ್ನು ಬಂಧಿಸಿದ್ದು, ಇದರಲ್ಲಿ ಮುಲ್ಕಿ ಠಾಣಾ ಸರಹದ್ದಿನಲ್ಲಿ 27 ವರ್ಷದ ಹಿಂದಿನ ಮತೀಯ ಗಲಭೆ ಪ್ರಕರಣದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಲಾಗಿರುತ್ತದೆ. ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿರುವ 52 ಎನ್.ಬಿ.ಡಬ್ಲ್ಯೂ ವಾರಂಟು ಆಸಾಮಿಗಳನ್ನು ಪತ್ತೆ ಮಾಡಲಾಗಿದೆ.
ಸೊತ್ತು ಕಳವು ಪ್ರಕರಣಗಳ ಪೈಕಿ 39 ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಪತ್ತೆ ಮಾಡಿ ಸುಮಾರು 1 ಕೋಟಿ 5 ಲಕ್ಷ ಮೌಲ್ಯದ ಕಳವಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಪೆಡ್ಲರ್ಸ್ ಗಳ ಮೇಲೆ 37 ಪ್ರರಕಣ ದಾಖಲಿಸಿ, 73 ಆರೋಪಿಗಳನ್ನು ದಸ್ತಗಿರಿ ಮಾಡಿ, ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, 46 ಡ್ರಗ್ ಪೆಡ್ಲರ್ಸ್ ಗಳು ಇನ್ನೂ ನ್ಯಾಯಾಂಗ ಬಂಧನದಲ್ಲಿರುತ್ತಾರೆ. ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ 89 ಪ್ರಕರಣವನ್ನು ದಾಖಲಿಸಿದ್ದು, 127 ಆಸಾಮಿಗಳನ್ನು ವಶಕ್ಕೆ ಪಡೆದು ಅವರ ಮೂಲಕ ಪೆಡ್ಲರ್ಸ್ ಗಳ ಮಾಹಿತಿಯನ್ನು ಕಲೆ ಹಾಕಿ ಕ್ರಮ ಕೈಗೊಳ್ಳಲಾಗಿರುತ್ತದೆ.
ಸೋಶಿಯಲ್ ಮೀಡಿಯಾದ ಮೇಲೆ ಇಲಾಖೆಯು ತೀವ್ರ ನಿಗಾ ಇಟ್ಟಿದ್ದು, ದ್ವೇಷ ಭಾಷಣ, ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ, ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಈಗಾಗಲೇ 22 ಆರೋಪಿಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಮುಖ ಪ್ರಕರಣಗಳಲ್ಲಿ ತನಿಖಾಧಿಕಾರಿ ಹಾಗೂ ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಉತ್ತಮ ಗುಣಮಟ್ಟದ ತನಿಖೆಯನ್ನು ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಗರಿಷ್ಟ ಮಟ್ಟದ ಶಿಕ್ಷೆಯನ್ನು ವಿಧಿಸಲು ಸಹಕರಿಸಿರುತ್ತಾರೆ.
ಎಲ್.ಪಿ.ಸಿ ಪ್ರಕರಣಗಳ (Long pending case) ಆರೋಪಿ ಪತ್ತೆ ಕಾರ್ಯಕ್ಕೆ 3 ಅಧಿಕಾರಿ ಮತ್ತು 11 ಸಿಬ್ಬಂದಿಗಳಿಗೆ, ತಲೆಮರೆಸಿಕೊಂಡಿದ್ದ ವಾರಂಟು ಅಸಾಮಿಗಳ ಪತ್ತೆ ಕಾರ್ಯಕ್ಕಾಗಿ 4 ಅಧಿಕಾರಿ ಮತ್ತು 18 ಸಿಬ್ಬಂದಿಗಳಿಗೆ, ಸೊತ್ತು ಕಳವು ಪ್ರಕರಣಗಳಲ್ಲಿ ಆರೋಪಿ ಹಾಗೂ ಸ್ವತ್ತು ಪತ್ತೆ ಕಾರ್ಯಕ್ಕಾಗಿ 5 ಅಧಿಕಾರಿ ಮತ್ತು 13 ಸಿಬ್ಬಂದಿಗಳಿಗೆ, ನ್ಯಾಯಾಲಯದಲ್ಲಿ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಉತ್ತಮ ಕಾರ್ಯಕ್ಕಾಗಿ 3 ಅಧಿಕಾರಿ ಮತ್ತು 8 ಸಿಬ್ಬಂದಿಗಳಿಗೆ ಗೌರವ ನೀಡಲಾಗಿದೆ.
ಪ್ರಮುಖ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆ ಕಾರ್ಯಕ್ಕಾಗಿ 9 ಅಧಿಕಾರಿ ಮತ್ತು 31 ಸಿಬ್ಬಂದಿಗಳಿಗೆ, ಪ್ರಮುಖ ಎನ್.ಡಿ.ಪಿ.ಎಸ್ ಪ್ರಕರಣಗಳ ಪತ್ತೆ ಕಾರ್ಯಕ್ಕಾಗಿ 3 ಅಧಿಕಾರಿ ಮತ್ತು 13 ಸಿಬ್ಬಂದಿಗಳಿಗೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ ಮತ್ತು ಸಂದೇಶಗಳನ್ನು ಮಾಡಿದ್ದವರನ್ನು ಪತ್ತೆ ಕಾರ್ಯಕ್ಕಾಗಿ 11 ಸಿಬ್ಬಂದಿಗಳಿಗೆ, ಕಾನೂನು ಸುವ್ಯವಸ್ಥೆ, ಸಂಚಾರ ಸುಧಾರಣೆ ಮತ್ತು ಇತರೆ ಉತ್ತಮ ಕಾರ್ಯಕ್ಕೆ 5 ಅಧಿಕಾರಿ ಮತ್ತು 16 ಸಿಬ್ಬಂದಿಗಳಿಗೆ ಹಾಗೂ ಕಾನೂನು ಸುವ್ಯವಸ್ಥೆಯ ಶಾಂತಿ ಕಾಪಾಡಲು ನೆರವಾದ ವಿಶೇಷ ಕಾರ್ಯಪಡೆಯ 19 ಸಿಬ್ಬಂದಿಗಳನ್ನು ಪುರಸ್ಕರಿಸಲಾಯಿತು.
In recognition of their efficiency and commitment in maintaining law and order, solving long-pending cases, and cracking down on criminal activities, 32 police officers and 121 staff members from the Mangaluru City Police Commissionerate were felicitated at the District Parade Ground on Thursday. Police Commissioner Sudheer Reddy awarded commendation certificates and cash rewards to the officers and staff. In addition, 19 members of special task forces who played a vital role in ensuring peace in the city were also honored.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm