ಬ್ರೇಕಿಂಗ್ ನ್ಯೂಸ್
16-09-25 06:51 pm Mangalore Correspondent ಕರಾವಳಿ
ಮಂಗಳೂರು, ಸೆ.16 : ಕರಾವಳಿಯಲ್ಲಿ ಕೆಂಪು ಕಲ್ಲು ಸಿಗದೆ ಕಟ್ಟಡ ಕಾರ್ಮಿಕರು, ಮನೆ ಕಟ್ಟುವವರು ತೀವ್ರ ತೊಂದರೆಗೀಡಾಗಿದ್ದಾರೆ, ಆದರೆ ಕಾಂಗ್ರೆಸ್ ಸರಕಾರ ಈ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೂ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸ್ಪೀಕರ್ ಯುಟಿ ಖಾದರ್ ಅವರ ನಿರ್ಲಕ್ಷ್ಯದ ಬಗ್ಗೆ ಬಿಜೆಪಿ ಶಾಸಕ, ಸಂಸದರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜಿಲ್ಲೆಯ ಜ್ವಲಂತ ಸಮಸ್ಯೆಯಿಂದ ಜನರು ಕಂಗೆಟ್ಟಿದ್ದರೆ, ಇದೇ ಭಾಗದವರಾದ ಸ್ಪೀಕರ್ ಯುಟಿ ಖಾದರ್ ವಿದೇಶ ಪ್ರವಾಸದಲ್ಲಿದ್ದಾರೆ. ಅವರಿಗೆ ಜಿಲ್ಲೆಯ ಸಮಸ್ಯೆ ಬಗೆಹರಿಸೋದು ಬೇಕಾಗಿಲ್ಲ. ಸ್ಪೀಕರ್ ಕಲ್ಲಿನ ಸಮಸ್ಯೆ ಬಗೆಹರಿಸೋದು ಬಿಟ್ಟು ಈಗ ಸ್ಪೀಕರ್ (ಧ್ವನಿವರ್ಧಕ) ಕೂಡ ಬಂದ್ ಆಗುವಂತಾಗಿದೆ. ಉಸ್ತುವಾರಿ ಸಚಿವರು ತಿಂಗಳಿಗೆ ಒಮ್ಮೆ ಬಂದರೆ ಬಂದರು, ಇಲ್ಲದಿದ್ದರೆ ಇಲ್ಲ. ಯಾವಾಗಲೊಮ್ಮೆ ಬರುವುದರಿಂದ ಬಾವ ಬಂದರು ಎನ್ನುವ ಸಿನಿಮಾ ಹಾಡಿನಂತೆ ಗುಂಡುರಾವ್ ಬಂದರು ಅಂತ ಜನ ಹಾಡು ಹೇಳುವ ಸ್ಥಿತಿಯಾಗಿದೆ ಎಂದು ವ್ಯಂಗ್ಯವಾಡಿದರು.
ವೇದವ್ಯಾಸ ಕಾಮತ್ ಮಾತನಾಡಿದ ಬೆನ್ನಲ್ಲೇ ಗುಂಡೂರಾಯರನ್ನು ಅಣಕಿಸಿ, ಬಾವ ಬಂದರು ಅನ್ನುವ ಹಾಡಿನ ಸೊಗಡಿನೊಂದಿಗೆ ಪದ್ಯವನ್ನೇ ರಚಿಸಿ ಹಾಡಿದರು. ಬಿಜೆಪಿ ವಕ್ತಾರ ಅರುಣ್ ಶೇಟ್ ಹಾಡು ರಚಿಸಿ ಸ್ವತಃ ಹಾಡಿ ಸೇರಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು. ಬಂದರೋ ಬಂದರೋ ಗುಂಡೂರಾಯರು, ಹೋದರೋ ಹೋದರೋ ಗುಂಡುರಾಯರು, ಬೆಂಗಳೂರು ಹೋದರೆ ಕಾಣದೇ ಮಾಯವಾದರು ಎನ್ನುತ್ತಾ ಹಾಡು ಕಟ್ಟಿದ್ದು ಸೇರಿದ್ದ ಜನರನ್ನು ರಂಜಿಸಿತ್ತು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಮರಳು ಮತ್ತು ಕೆಂಪು ಕಲ್ಲಿನ ಸಮಸ್ಯೆಯಿಂದಾಗಿ ಜನರು ತೀವ್ರ ರೀತಿಯಲ್ಲಿ ಬಳಲುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ ಇದಕ್ಕೂ ತಮಗೂ ಸಂಬಂಧ ಇಲ್ಲ ಎನ್ನುವಂತಿದ್ದಾರೆ. ಉಸ್ತುವಾರಿ ಸಚಿವರು ಪ್ರತ್ಯೇಕ ನೀತಿ ಮಾಡುವುದಾಗಿ ಹೇಳಿ ಮೂರು ತಿಂಗಳಾಯ್ತು. ಇವರ ನಿರ್ಲಕ್ಷ್ಯದಿಂದಾಗಿ ಕಟ್ಟಡ ನಿರ್ಮಾಣ ವಲಯದಲ್ಲಿ ಕೋಟ್ಯಂತರ ರೂ. ಆದಾಯ ನಷ್ಟವಾಗಿದೆ. ಇದಕ್ಕೆ ಯಾರು ಹೊಣೆ, ಜನರ ಸಮಸ್ಯೆಗೆ ಸ್ಪಂದಿಸದ ಉಸ್ತುವಾರಿ ಯಾಕಿರಬೇಕು ಎಂದು ಪ್ರಶ್ನಿಸಿದರು.
ಬೆಳಗ್ಗೆ ಹಾರೆ, ಗುದ್ದಲಿ, ಖಾಲಿ ಬುಟ್ಟಿ ತಂದಿದ್ದು ಕಾರ್ಮಿಕರು ಕೆಲಸ ಇಲ್ಲದೆ ಕಂಗಾಲಾಗಿರುವುದನ್ನ ಸಂಕೇತವಾಗಿಸಿ ಪ್ರತಿಭಟನೆ ಉದ್ಘಾಟನೆ ಮಾಡಲಾಗಿತ್ತು. ಸಂಜೆಯ ವೇಳೆಗೆ ಸ್ಥಳಕ್ಕೆ ಬಂದ ಅಪರ ಜಿಲ್ಲಾಧಿಕಾರಿಗೆ ತುರ್ತಾಗಿ ಕೆಂಪು ಕಲ್ಲು ಸಮಸ್ಯೆ ಬಗೆಹರಿಸಬೇಕೆಂದು ಮನವಿ ನೀಡಲಾಯಿತು. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಕಿಶೋರ್ ಕುಮಾರ್, ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ ಮತ್ತಿತರರು ಇದ್ದರು.
With the acute shortage of red laterite stone affecting construction workers and builders across the coastal region, the Dakshina Kannada District BJP staged a massive day-long protest in front of the Mini Vidhana Soudha in Mangaluru, accusing the Congress-led state government of gross negligence.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm