ಬ್ರೇಕಿಂಗ್ ನ್ಯೂಸ್
18-09-25 09:09 pm Mangalore Correspondent ಕರಾವಳಿ
ಮಂಗಳೂರು, ಸೆ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೈನಿಕರ/ಮಾಜಿ ಸೈನಿಕರ/ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲಿಸಿದೆ.
ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಅದಕ್ಕೆ ಹೊಣೆಗಾರರನ್ನಾಗಿಸಿ ಪ್ರಕರಣ ದಾಖಲಿಸಲಾಗಿದೆ.
ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಕಲ್ಪಿಸಲು ಸರ್ಕಾರದ ವಿವಿಧ ಇಲಾಖೆಗಳಿಂದ ಪೂರಕ ಸ್ಪಂದನೆ ದೊರೆಯದೆ, ಅಧಿಕಾರಿಗಳು ವಿನಾಕಾರಣ ವಿಳಂಬಿಸಿರುವುದು ಲೋಕಾಯುಕ್ತ ಕಾಯ್ದೆಯಡಿ "ದುರಾಡಳಿತ" ವ್ಯಾಪ್ತಿಗೆ ಒಳಪಡುವುದರಿಂದ ಲೋಕಾಯುಕ್ತ ಸಂಸ್ಥೆಯಿಂದ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ. ಸರ್ಕಾರದ ಆದೇಶಗಳು, ಸುತ್ತೋಲೆಗಳು ಹಾಗೂ ಕಾನೂನಿನ್ವಯ ನಿವೃತ್ತ ಯೋಧರಿಗೆ, ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನೀಡುವಂತೆ ಉಚ್ಛ ನ್ಯಾಯಾಲಯ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶಗಳು ಇದ್ದರೂ ಸರ್ಕಾರಿ ನೌಕರರು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು ಸೌಲಭ್ಯಗಳನ್ನು ನೀಡಲು ಕ್ರಮ ಕೈಗೊಳ್ಳದೆ ತೊಂದರೆ ನೀಡುತ್ತಿರುವುದು ಕಂಡುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತರಾದ ಯೋಧರಿಗೆ ಹಾಗೂ ಅವಲಂಬಿತರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ/ಸಾರ್ವಜನಿಕ ನೌಕರ/ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ, ದೂರಿನಲ್ಲಿ ಹಿತಾಸಕ್ತಿ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಮಂಗಳೂರು ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
The Lokayukta has registered a suo motu complaint against all Tahsildars and Sub-Divisional Officers (SDOs) in Dakshina Kannada district for allegedly neglecting to provide government benefits due to soldiers, ex-servicemen, freedom fighters, and their dependents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am