ಬ್ರೇಕಿಂಗ್ ನ್ಯೂಸ್
24-09-25 10:48 pm Mangalore Correspondent ಕರಾವಳಿ
ಮಂಗಳೂರು, ಸೆ.24: ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ (ಯು.ಜಿ.ಡಿ)ಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ವಿಧಾನ ಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಅಧ್ಯಕ್ಷ ಶರವಣ ಟಿ.ಎ. ಅವರ ನೇತೃತ್ವದ ಸಮಿತಿಯು ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಭರವಸೆಗಳನ್ನು ಪರಿಶೀಲಿಸಿತು. ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಯು.ಜಿ.ಡಿ. ಕಾಮಗಾರಿ ಆರಂಭಗೊಂಡು 6 ವರ್ಷ ಕಳೆದರೂ, ಯೋಜನೆ ಇನ್ನೂ ಪೂರ್ಣಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಮಿತಿ ಸದಸ್ಯರು, ಇದಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿ ಮುಂದಿನ 6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿತು. ಯೋಜನೆ ಜಾರಿಗೊಳಿಸಲು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಿಳಿಸಿತು.

ಕೆ.ಯು.ಐ.ಡಿ.ಎಫ್.ಸಿ. ಅಧಿಕಾರಿಗಳು ಸಭೆಯಲ್ಲಿ ಸಮಿತಿ ಮುಂದೆ ಯೋಜನೆ ವಿಳಂಬದ ಕಾರಣ ವಿವರಿಸಿತು. ಒಳಚರಂಡಿ ಮನೆ ಮನೆ ಸಂಪರ್ಕಕ್ಕೆ ಹೆಚ್ಚುವರಿ 22 ಕೋಟಿ ರೂಪಾಯಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸುರತ್ಕಲ್ ವಲಯದಲ್ಲಿ ಒಳಚರಂಡಿ ಕಾಮಗಾರಿಯಲ್ಲಿ 116 ಕಿ.ಮೀ. ಪೈಪ್ ಲೈನ್ ಹಾಗೂ 824 ಮ್ಯಾನ್ ಹೋಲ್ ಗಳನ್ನು ಮಾಡಲಾಗಿದೆ. ಇಲ್ಲಿನ ಬಹುತೇಕ ಪ್ರದೇಶಗಳಲ್ಲಿ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಸಮಿತಿಗೆ ವಿವರಿಸಿದರು. ಈ ಎರಡೂ ಒಳಚರಂಡಿ ಕಾಮಗಾರಿಗಳನ್ನು ಸಮರ್ಪಕ ಅನುಷ್ಠಾನಗೊಳಿಸಲು ಗಮನಹರಿಸಿ, ಮುಂದಿನ 15 ದಿನಗಳೊಳಗೆ ವರದಿ ನೀಡುವಂತೆ ಸಮಿತಿ ಅಧ್ಯಕ್ಷ ಶರವಣ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಕೆರೆಗಳ ಸಂರಕ್ಷಣೆ, ನೀರು ಮಾಲಿನ್ಯದಂತಹ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸಲು ಸಮಿತಿಯು ಮಂಡಳಿಗೆ ಸೂಚಿಸಿತು.
ನ್ಯಾಯಾಲಯದಲ್ಲಿರುವ ಪ್ರಕರಣಗಳಲ್ಲಿ ಸಮರ್ಥವಾಗಿ ದಾಖಲೆಗಳನ್ನು ಮಂಡಿಸಬೇಕು ಎಂದು ಸೂಚಿಸಿತು. ಮಾಲಿನ್ಯ ಮಂಡಳಿಗೆ ಪ್ರತ್ಯೇಕ ಕಾನೂನು ಕೋಶ ಒದಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದೂ ಅಧ್ಯಕ್ಷರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಸಂಬಂಧಿಸಿದ 3 ಪ್ರಕರಣ ಹಾಗೂ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ 1 ಪ್ರಕರಣವು ರಾಷ್ಟ್ರೀಯ ಹಸಿರು ಪೀಠ(ಎನ್.ಜಿ.ಟಿ)ದ ಮುಂದೆ ಇದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸಮಿತಿಗೆ ವಿವರಿಸಿದರು. ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ಠಾಣೆ ತೆರೆಯಲು ಅಗತ್ಯ ಜಾಗ ಒದಗಿಸಲು ಅಧ್ಯಕ್ಷರು ಮಹಾನಗರ ಪಾಲಿಕೆಗೆ ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿಯ ಸದಸ್ಯರಾದ ಮಂಜುನಾಥ ಭಂಡಾರಿ, ಪ್ರತಾಪಸಿಂಹ ನಾಯಕ್, ಡಿ.ಎಸ್. ಅರುಣ್, ಕೆ.ಎಸ್.ನವೀನ್, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮತ್ತಿತರರು ಇದ್ದರು. ಇದಕ್ಕೂ ಮೊದಲು ಸಮಿತಿಯು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ, ಸರಕಾರಿ ಭರವಸೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಅನುಷ್ಠಾನ ಕುರಿತು ಸಭೆ ನಡೆಸಿತು.
The Legislative Council’s Committee on Government Assurances, headed by chairman T.A. Sharavana, has directed officials to expedite the implementation of underground drainage (UGD) projects in Surathkal zone of Mangaluru City Corporation and Ullal City Municipality.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm