ಬ್ರೇಕಿಂಗ್ ನ್ಯೂಸ್
25-09-25 07:29 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಜಿಎಸ್ ಟಿಯಿಂದ ಅದೆಷ್ಟೋ ಸಂಖ್ಯೆಯ ಕಂಪೆನಿಗಳು ನೆಲ ಕಚ್ಚಿದೆ, ಉದ್ದಿಮೆಗಳು ನಷ್ಟ ಅನುಭವಿಸಿವೆ. ಆವಾಗ್ಲೇ ಜಿಎಸ್ ಟಿಯನ್ನು ಸರಳೀಕರಣ ಮಾಡುತ್ತಿದ್ದರೆ ಆರ್ಥಿಕತೆ ಸುಧಾರಣೆ ಕಾಣುತ್ತಿತ್ತು. ಕಳೆದ 8 ವರ್ಷಗಳಲ್ಲಿ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆಯನ್ನು ಸಂಗ್ರಹ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡಿದ್ದರೆ ಜಿಎಸ್ ಟಿಯನ್ನು ಜಾರಿಗೆ ತರುತ್ತಿತ್ತು. ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಈ ವಿಷಯ ಇದ್ದವು. ಇದು ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ಕನಸಿನ ಕೂಸು ಕೂಡ ಆಗಿತ್ತು. ಆದರೆ ಮನಮೋಹನ್ ಸಿಂಗ್ ಅವರ ಪರಿಕಲ್ಪನೆಯ ಜಿ ಎಸ್ ಟಿ ಗೂ ಬಿಜೆಪಿ ಸರ್ಕಾರ ಜಾರಿಗೆ ತಂದ ಜಿ ಎಸ್ ಟಿ ಗೂ ಹಲವಾರು ವ್ಯತ್ಯಾಸಗಳಿದ್ದವು ಎಂದರು.
ಮುಂದೆ ಬಿಹಾರ ಸೇರಿದಂತೆ ಇತರೇ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ. ಎಲ್ಲಿ ಚುನಾವಣೆಯಲ್ಲಿ ಕಡಿಮೆ ಮತ ಸಿಗುತ್ತೋ ಎಂಬ ಭಯದಲ್ಲಿ ಜಿಎಸ್ ಟಿಯನ್ನು ಕಡಿಮೆ ಮಾಡಿದ್ದಾರೆ ಎಂದು ಅವರು ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಸಾಹುಲ್ ಹಮೀದ್, ಎಸ್ ಅಪ್ಪಿ, ಇಬ್ರಾಹಿಂ ನವಾಜ್, ಸುಹಾನ್ ಆಳ್ವ, ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡ್, ಚಿತ್ತರಂಜನ್ ಶೆಟ್ಟಿ, ವಿಕಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
MLC Manjunath Bhandari questioned the BJP-led central government’s decision to celebrate the reduction in GST rates, pointing out that it was the same government that had initially imposed heavy taxes.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm