ಬ್ರೇಕಿಂಗ್ ನ್ಯೂಸ್
06-10-25 07:19 pm Mangalore Correspondent ಕರಾವಳಿ
ಮಂಗಳೂರು, ಅ.6 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ PM-ABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಿಗೂ ಹೊಸ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರು ಮಾಡಲಾಗಿದೆ. ಪ್ರತಿಯೊಂದು ಆಯುಷ್ಮಾನ್ ಭಾರತ್ ಹೆಲ್ತ್ ಸೆಂಟರ್ ಸ್ಥಾಪನೆಗೂ ತಲಾ 65 ಲಕ್ಷ ರೂ. ಮಂಜೂರಾಗಿದ್ದು, ಅದರಡಿ ಸೂಕ್ತ ಕಟ್ಟಡ ಸೇರಿದಂತೆ ಅಗತ್ಯ ಮೂಲಸೌಕರ್ಯ ವ್ಯವಸ್ಥೆಗಳನ್ನು ಒದಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಒಟ್ಟು 38 ಊರುಗಳಲ್ಲಿ ನೂತನ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಂಸದ ಕ್ಯಾ.ಚೌಟ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 38 ಕಡೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಯಿಂದ ಗ್ರಾಮೀಣ ಭಾಗದ ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ. ಜತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳೇ ಇಲ್ಲದ ಊರುಗಳಿಗೂ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲು ಪ್ರಧಾನಮಂತ್ರಿಗಳ ಈ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ನೆರವಾಗಲಿವೆ. ಹೀಗಾಗಿ, ಈ ಎಚ್‌ಡಬ್ಲ್ಯುಸಿ ಕೇಂದ್ರಗಳ ಸ್ಥಾಪನೆಗೆ ಅನುದಾನ ಮಂಜೂರು ಮಾಡಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಹಾಗೂ ಆರೋಗ್ಯ ಸಚಿವಾಲಯಕ್ಕೆ ಧನ್ಯವಾದ ಸಲ್ಲಿಸುವುದಾಗಿ ಎಂದು ಕ್ಯಾ. ಚೌಟ ತಿಳಿಸಿದ್ದಾರೆ.
38 HWC ಕೇಂದ್ರಗಳು ಹೀಗಿವೆ
ಪುತ್ತೂರು ತಾಲೂಕಿನ ಕೈಕಂಬ, ಪಡ್ನೂರು, ನೆಟ್ಟಾರು, ಕುರಿಯ, ಕುಟ್ರುಪಾಡಿ ಮತ್ತು ನೆಕ್ಕಿಲಾಡಿ. ಸುಳ್ಯದ ಐನಕಿದು, ನೆಲ್ಲೂರು ಕೆಮ್ರಾಜೆ, ಸುಳ್ಯ-ಡಿ, ತೋಡಿಕಾನ, ಸುಳ್ಯ-ಎ, ಸುಳ್ಯ-ಬಿ ಮತ್ತು ಸುಳ್ಯ-ಸಿ. ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಮಂಗಿಲಪದವು, ಮೂಡುಪಡುಕೋಡಿ, ಸರಪಾಡಿ, ವೀರಕಂಬ, ಸಜಿಪಪಡು, ವಿಟ್ಲ ಮುನ್ನೂರು (ಶಂಭೂರು), ಕುರಿಯಾಳ ಮತ್ತು ಪೊಳಲಿ.
ಬೆಳ್ತಂಗಡಿ ತಾಲೂಕಿನ ಕುತ್ಲೂರು, ನಾಲ್ಕೂರು, ತೆಂಕ ಕರಂದೂರು, ಲಾಯಿಲ- ಎ, ನ್ಯಾಯತರ್ಪು ಮತ್ತು ಪುದುವೆಟ್ಟು. ಮಂಗಳೂರು ತಾಲೂಕಿನ ಕೆಂಜಾರು, ಮನ್ನಬೆಟ್ಟು, ಮೂಡುಶೆಡ್ಡೆ ಮತ್ತು ಕೊಲ್ಲೂರು. ಮೂಡುಬಿದಿರೆಯ ವಾಲ್ಪಾಡಿ, ಮಾರ್ಪಾಡಿ-ಎ, ಮಾರ್ಪಾಡಿ-ಬಿ, ತೋಕೂರು ಪ್ರಾಂತ್ಯ-ಬಿ ಮತ್ತು ಪ್ರಾಂತ್ಯ-ಸಿ.
Under the Prime Minister’s Ayushman Bharat Health Infrastructure Mission (PM-ABHIM), ₹24.70 crore has been sanctioned for setting up 38 Ayushman Bharat–Health and Wellness Centres (HWC) across Dakshina Kannada district, MP Brijesh Chowta announced. Each centre will receive ₹65 lakh for construction and essential healthcare infrastructure.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am