ಬ್ರೇಕಿಂಗ್ ನ್ಯೂಸ್
06-10-25 10:42 pm Mangalore Correspondent ಕರಾವಳಿ
ಮಂಗಳೂರು, ಅ.6: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇದೇ ಸಾಲಿನಲ್ಲಿ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ನಡೆಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಿಗೆ 13 ಸಾವಿರ, ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕಾತಿ ನಡೆಯಲಿದೆ. ನ್ಯಾ. ನಾಗಮೋಹನ್‌ದಾಸ್ ಅವರ ವರದಿ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿತ್ತು. ಈಗ ಪ್ರಕ್ರಿಯೆ ಆರಂಭಿಸಿದ್ದೇವೆ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 4,700 ಶಿಕ್ಷಕರ ನೇಮಕಾತಿ ಮಾತ್ರ ಆಗಿತ್ತು. ನಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ 13,000 ಶಿಕ್ಷಕರ ನೇಮಕಾತಿ ನಡೆದಿದೆ. ಈಗ ಮತ್ತೆ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ನಡೆಯಲಿದೆ. ಪ್ರಸ್ತುತ ರಾಜ್ಯದಲ್ಲಿ 51 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ, ಆ ಹುದ್ದೆಗಳಿಗೆ ಗೌರವ ಶಿಕ್ಷಕರನ್ನು ನಿಯೋಜಿಸಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಮಕ್ಕಳ ಫಲಿತಾಂಶ ಏರಿಕೆ
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಗೆ ಮೂರು ಸ್ತರದ ಪರೀಕ್ಷಾ ಪದ್ಧತಿ ಅಳವಡಿಸಿದ್ದರಿಂದ ಮಕ್ಕಳ ಫಲಿತಾಂಶ ಹೆಚ್ಚಿಸಲು ಸಾಧ್ಯವಾಗಿದೆ. ಈ ಪರೀಕ್ಷಾ ವ್ಯವಸ್ಥೆಯಿಂದ 2ನೇ ಮತ್ತು 3ನೇ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 1,16,000 ಮಕ್ಕಳು ಉತ್ತೀರ್ಣರಾಗಿದ್ದು, ಪಿಯುಸಿಯಲ್ಲಿ 56,000ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷಾ ವ್ಯವಸ್ಥೆಯನ್ನು ಉಚಿತವಾಗಿ ಮಾಡುವ ಮೂಲಕ ಬಡ, ಹಿಂದುಳಿದ ಮಕ್ಕಳಿಗೆ ಒಳಿತಾಗಿದೆ. ಈ ಮಾದರಿಯನ್ನು ಕೇಂದ್ರ ಸರ್ಕಾರವೂ ಕಾಪಿ ಮಾಡಲು ಹೊರಟಿದೆ ಎಂದು ಹೇಳಿದರು.
ಮೋದಿಯ ಜಾತಿ ಗಣತಿ ವಿರೋಧಿಸ್ತಾರಾ?
ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳ ಬಗ್ಗೆ ವಿಪಕ್ಷ ಬಿಜೆಪಿಯವರು ಬಲವಾಗಿ ವಿರೋಧಿಸಿದ್ದರು. ಈಗ ಮೋದಿ ಅವರೂ ಗ್ಯಾರಂಟಿಯನ್ನು ನಕಲು ಮಾಡಿದ್ದರಿಂದ ರಾಜ್ಯ ಬಿಜೆಪಿಯವರು ಸುಮ್ಮನಾಗಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ಮಾಡುತ್ತೇವೆ ಎಂದಾಗ ಸಮೀಕ್ಷೆಗೆ ಸಹಕರಿಸದಂತೆ ಬಿಜೆಪಿ ನಾಯಕರು ವಿರೋಧಿಸಿದರು. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಜಾತಿ ಗಣತಿಯನ್ನೂ ಇವರು ವಿರೋಧಿಸುತ್ತಾರಾ ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು.
ಸಮೀಕ್ಷೆ ಕಾರ್ಯ ಎಷ್ಟಾಗಿದೆ ಎಂಬುದನ್ನು ನೋಡಿಕೊಂಡು ಆಯೋಗವು ಸರ್ಕಾರಕ್ಕೆ ಮನವಿ ಸಲ್ಲಿಸಲಿದೆ. ಅದರ ಮೇರೆಗೆ ಮಕ್ಕಳ ಪಾಠ- ಚಟುವಟಿಕೆಗಳಿಗೆ ತೊಂದರೆ ಆಗದಂತೆ ಯಾವ ರೀತಿಯಲ್ಲಿ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಇಲಾಖೆ ನಿರ್ಧರಿಸಲಿದೆ. ಈ ಕುರಿತು ಶಿಕ್ಷಕರ ಸಂಘದ ಜತೆ ಮಾತುಕತೆ ನಡೆಸಿ ಮುಂದುವರಿಯಲಾಗುವುದು. ಶೇ. 95ರಷ್ಟು ಶಿಕ್ಷಕರು ಸಮೀಕ್ಷೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಖಂಡರಾದ ಪದ್ಮರಾಜ್, ಶುಭೋದಯ ಆಳ್ವ, ಪದ್ಮನಾಭ ಕೋಟ್ಯಾನ್, ಟಿ.ಕೆ. ಸುಧೀರ್, ನೀರಜ್‌ಪಾಲ್ ಮತ್ತಿತರರಿದ್ದರು.
Karnataka School Education Minister S. Madhu Bangarappa announced that more than 18,500 teachers will be appointed in government and aided schools this year, with the recruitment process to be completed before the next academic year. Of these, 13,000 posts are in government schools and about 5,800 in aided institutions. The process had been delayed due to Justice Nagamohan Das Commission’s report but has now resumed.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm