ಬ್ರೇಕಿಂಗ್ ನ್ಯೂಸ್
09-10-25 08:22 pm Mangalore Correspondent ಕರಾವಳಿ
ಮಂಗಳೂರು, ಅ.9 : ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 80ನೇ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.
ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್‌ನಲ್ಲಿ ಅ.8ರಿಂದ 14ರ ವರೆಗೆ ನಡೆಯುವ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಭಾಗವಹಿಸುತ್ತಿದೆ. ಈ ತಂಡದಲ್ಲಿ ಕರ್ನಾಟಕದಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಸ್ಥಾನ ಪಡೆದಿರುವುದು ಮಾತ್ರವಲ್ಲ, ವಿಶ್ವ ವೇದಿಕೆಯಲ್ಲಿ ಭಾರತದ ಸುಸ್ಥಿರ ಅಭಿವೃದ್ಧಿ ಕುರಿತಂತೆ ವಿಚಾರ ಮಂಡಿಸುವ ಮೂಲಕ ಗಮನಸೆಳೆದಿದ್ದಾರೆ.
ಅಧಿವೇಶನದಲ್ಲಿ ಕ್ಯಾ.ಚೌಟ ಅವರು "2030ಕ್ಕೆ ಐದು ವರ್ಷಗಳು-ಸುಸ್ಥಿರ ಅಭಿವೃದ್ಧಿಗಾಗಿ ಬಹುಪಕ್ಷೀಯ ಪರಿಹಾರಗಳು " ವಿಷಯದ ಮೇಲೆ ಭವಿಷ್ಯ ಭಾರತದ ರಾಷ್ಟ್ರೀಯ ನಿಲುವನ್ನು ಮಂಡಿಸಿದ್ದಾರೆ. ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸಲು ಬಹುಪಕ್ಷೀಯ ಸಹಕಾರ ಮತ್ತು ಸಂಪನ್ಮೂಲಗಳ ಸ್ಥಿರತೆ ಅತ್ಯಗತ್ಯ. ಅಲ್ಲದೆ, ಭಾರತವು ಅಭಿವೃದ್ಧಿ ಹೊಂದದ(LDCs) ಮತ್ತು ಭೂ-ಆವೃತ ಅಭಿವೃದ್ಧಿ ಶೀಲ(LLDCs) ರಾಷ್ಟ್ರಗಳಿಗೆ ತನ್ನ ಬೆಂಬಲ ನೀಡುವುದನ್ನು ಮುಂದುವರಿಸುವುದಾಗಿ ಮತ್ತು ಜಾಗತಿಕ ಸಹಭಾಗಿತ್ವಕ್ಕೆ ಸಹಕಾರದ ಮಹತ್ವವನ್ನು ಭಾರತ ಪ್ರತಿಪಾದಿಸುತ್ತಿರುವುದಾಗಿ ಹೇಳಿದರು.
ಕ್ಯಾ. ಚೌಟ ಅವರನ್ನು ಒಳಗೊಂಡಿರುವ ಈ ನಿಯೋಗದಲ್ಲಿ ಸಂಸದರಾಗಿರುವ ಅನಿಲ್ ಬಲೂನಿ, ಡಾ. ನಿಶಿಕಾಂತ್ ದುಬೆ, ಉಜ್ವಲ್ ನಿಕಮ್, ಎಸ್ ಫಾಂಗ್ನಾನ್ ಕೊನ್ಯಾಕ್, ಡಾ. ಮೇಧಾ ವಿಶ್ರಮ್ ಕುಲಕರ್ಣಿ, ಪೂನಂ ಬೆನ್ ಮಾದಮ್, ವಂಶಿ ಕೃಷ್ಣ ಗದ್ದಾಮ್, ವಿವೇಕ್ ತಂಖಾ, ಡಾ. ಟಿ ಸುಮತಿ, ಎನ್.ಕೆ. ಪ್ರೇಮಚಂದ್ರನ್, ಕುಮಾರಿ ಸೆಲ್ಜಾ, ಮಾತುಕುಮಿಲ್ಲಿ ಶ್ರೀಭರತ್ ಮತ್ತು ರಾಜೀವ್ ರಾಯ್ ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕ್ಯಾ. ಚೌಟ, "ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಪ್ರತಿನಿಧಿಯಾಗಿ ವಿಶ್ವ ವೇದಿಕೆಯಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿರುವುದಕ್ಕೆ ಬಹಳ ಹೆಮ್ಮೆ ತಂದಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸುವ ಅತ್ಯಂತ ಮಹತ್ತರ ಜವಾಬ್ದಾರಿಯನ್ನು ನನ್ನಂತಹ ಸಾಮಾನ್ಯ ಬಿಜೆಪಿ ಕಾರ್ಯಕರ್ತನಿಗೆ ವಹಿಸಿರುವ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಸಂಬಂಧಪಟ್ಟ ಪಕ್ಷದ ಎಲ್ಲ ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ವಿಶೇಷವಾಗಿ ಗೃಹ ಸಚಿವರಾದ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಕಿರಣ್ ರಿಜುಜಿ ಅವರ ನಿರಂತರ ಮಾರ್ಗದರ್ಶನ ಮತ್ತು ಬೆಂಬಲಕ್ಕೆ ಹಾಗೂ ದಕ್ಷಿಣ ಕನ್ನಡ ಜನತೆಗೆ ನಾನು ಅಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
My pleasure and privilege to deliver Bharat’s national statement at the General Debate of the Second Committee of the #UNGA, agenda item 21 and 23 on the theme “Five years to 2030 – Multilateral solutions for sustainable development”.
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) October 8, 2025
Reiterated that India led by PM Shri… pic.twitter.com/M548Jucuje
Dakshina Kannada MP Capt. Brijesh Chowta proudly represented India at the 80th United Nations General Assembly (UNGA) session held in New York. As part of a multi-party Indian delegation led by MP P.P. Chaudhary, Capt. Chowta delivered India’s address on “Five Years to 2030 – Multilateral Solutions for Sustainable Development.”
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm