ಬ್ರೇಕಿಂಗ್ ನ್ಯೂಸ್
10-10-25 06:52 pm Mangalore Correspondent ಕರಾವಳಿ
ಮಂಗಳೂರು, ಅ.10 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಕಾವೂರು ಬಳಿಯ ಕುಂಜತ್ ಬೈಲಿನಲ್ಲಿ ಕಾದಿರಿಸಲಾದ ಲೇಔಟ್ ಅವೈಜ್ಞಾನಿಕ ರೀತಿಯಲ್ಲಿ ಮಾಡಿದ್ದಾರೆ. ಮಾರುಕಟ್ಟೆಗಿಂತ ಹೆಚ್ಚಿನ ದರದಲ್ಲಿ ಪಡೆದಿದ್ದು, ಅದನ್ನು ಅಭಿವೃದ್ಧಿ ಪಡಿಸದೆ ಮಾರಾಟಕ್ಕಿಟ್ಟಿದ್ದಾರೆ. ಈಗ ಕನಿಷ್ಠ ಸರ್ಕಾರಕ್ಕೆ ನಷ್ಟವಾಗದಂತೆ ನೋಡಿಕೊಳ್ಳಬೇಕಾದ ಸವಾಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮುಡಾ ಮತ್ತು ಮಂಗಳೂರು ನಗರ ಪಾಲಿಕೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸಚಿವರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈ ವೇಳೆ, ಮುಡಾ ಲೇಔಟ್ ಬಗ್ಗೆ ಪ್ರಸ್ತಾಪಿಸುತ್ತ ಕುಂಜತ್ ಬೈಲ್ ಮತ್ತು ಕೊಣಾಜೆಯಲ್ಲಿ ಲೇಔಟ್ ಮಾಡಲಾಗಿದೆ. ಆದರೆ ಕುಂಜತ್ತಬೈಲಿನ ಲೇಔಟ್ ಅಭಿವೃದ್ಧಿ ಆಗಿಲ್ಲ. ಅದರ ಭೂಖರೀದಿ, ಹಿಂದು ಮುಂದಿನ ವಿಚಾರ ನೋಡಲು ಹೋದರೆ ಬಹಳಷ್ಟು ಇದೆ. ಸದ್ಯಕ್ಕೆ ಅಲ್ಲಿ ಸರ್ಕಾರಕ್ಕೆ ನಷ್ಟ ಆಗದಂತೆ ಏನೇನು ಮಾಡಬೇಕು ಎನ್ನುವ ಬಗ್ಗೆ ಅಧಿಕಾರಿಗಳ ವರದಿ ಕೇಳಿದ್ದೇನೆ. 20 ಶೇಕಡಾ ಅಷ್ಟೇ ಮಾರಾಟ ಆಗಿದೆ ಎಂದು ಹೇಳಿದರು.
ಮುಡಾ ಲೇಔಟ್ ಬಗ್ಗೆ ನವೆಂಬರ್ ನಲ್ಲಿ ಮತ್ತೊಮ್ಮೆ ಪರಿಶೀಲನೆ ಮಾಡುತ್ತೇನೆ. ಚೇಳಾಯರು ಸೈಟ್ ಬಗ್ಗೆ ಸಮಸ್ಯೆ ಇದೆ. ಎರಡು ಕಡೆ ಸೈಟ್ ಮಾರಾಟವಾಗಿ ಆದಾಯ ಬಂದರೆ ಅಲ್ಲಿಯೂ ಅಭಿವೃದ್ಧಿ ಕಾರ್ಯ ಮಾಡಬಹುದಾಗಿದೆ ಎಂದರು.
ಸೋಮೇಶ್ವರದಿಂದ ಸಸಿಹಿತ್ಲು ವರೆಗೆ ಮಂಗಳಾ ಕಾರ್ನಿಶ್ ಹೆಸರಲ್ಲಿ ರಸ್ತೆ ಮಾಡುವುದನ್ನು ಮಾಸ್ಟರ್ ಪ್ಲಾನ್ ಅಡಿ ತರಲಾಗಿದೆ. ಮಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಎಲ್ಲ ಅವಕಾಶಗಳಿದ್ದು, ಸಿಎಂ ಮತ್ತು ಡಿಸಿಎಂ ಇಲ್ಲಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. 135 ಕೋಟಿ ವೆಚ್ಚದಲ್ಲಿ ಐಟಿ ಪಾರ್ಕ್ ಮಾಡಲು ಸಂಪುಟದ ಒಪ್ಪಿಗೆ ಸಿಕ್ಕಿದೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಐಟಿ ಬಿಟಿ ಬೆಳವಣಿಗೆ ಮಂಗಳೂರಿನ ಮಟ್ಟಿಗೆ ಗೇಮ್ ಚೇಂಜರ್ ಆಗಬಹುದು. ಪಿಪಿಟಿ ಮಾಡೆಲ್ ನಲ್ಲಿ ಐಟಿ ಪಾರ್ಕ್ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಎಂಎಲ್ಸಿ ಮಂಜುನಾಥ ಭಂಡಾರಿ, ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಅನಿಲ್ ಕುಮಾರ್ ಇದ್ದರು.
District in-charge and Urban Development Minister Dinesh Gundu Rao has expressed strong dissatisfaction over the unscientific layout developed by Mangalore Urban Development Authority (MUDA) at Kunjathbail near Kavoor. He stated that MUDA had acquired land at prices higher than market rates but failed to develop it before putting it up for sale, resulting in poor response — with only about 20% of the sites sold so far.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am