ಬ್ರೇಕಿಂಗ್ ನ್ಯೂಸ್
14-10-25 06:39 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆ ಬಸ್ ತಂಗುದಾಣದಲ್ಲಿ ಕೊಣಾಜೆ ಠಾಣೆಯ ಸರಕಳ್ಳತನದ ಆರೋಪಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮಾದಕ ಪದಾರ್ಥ ವ್ಯಸನದಿಂದ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಮುದುಂಗಾರುಕಟ್ಟೆ ಬಳಿಯ ಪಾತೂರು ನಿವಾಸಿ ಮಹಮ್ಮದ್ ನಿಯಾಫ್ (28) ಸಾವನ್ನಪ್ಪಿರುವ ಯುವಕ. ಇಂದು ಮಧ್ಯಾಹ್ನ ವ್ಯಕ್ತಿಯೋರ್ವರು ತಮ್ಮ ದ್ವಿಚಕ್ರ ವಾಹನವನ್ನು ಮುದುಂಗಾರು ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಲು ತೆರಳಿದಾಗ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಸ್ಥಳಕ್ಕೆ ಕೂಡಲೇ ಕೊಣಾಜೆ ಪೊಲೀಸರು ದೌಡಾಯಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮೃತ ನಿಯಾಫ್ ಬಾವಿಯ ರಿಂಗ್ ತಯಾರಿಕೆ ಹಾಗೂ ಇತರ ಕೂಲಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಭಾನುವಾರ ಸಂಜೆ ಮನೆ ಬಿಟ್ಟಿದ್ದ ನಿಯಾಫ್ ನಿನ್ನೆ ಬೆಳಗ್ಗೆ ಚಿಕ್ಕಪ್ಪನ ಮನೆಗೆ ತೆರಳಿ ಮಾತಾನಾಡಿ ಹಿಂತಿರುಗಿದ್ದನಂತೆ. ಸಂಜೆ ಮನೆಗೆ ತೆರಳದ ನಿಯಾಫ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಇಂದು ಮಧ್ಯಾಹ್ನ ವೇಳೆ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆ ಬಳಿಕವೇ ಸಾವಿಗೆ ನಿಖರ ಕಾರಣವೇನೆಂದು ತಿಳಿದು ಬರಬೇಕಿದೆ.
ಕಳೆದ ವರ್ಷ ಮುದುಂಗಾರುಕಟ್ಟೆಯ ಬಳಿ ಮಹಿಳೆಯ ಸರ ಕಳ್ಳತನ ಪ್ರಕರಣದಲ್ಲಿ ನಿಯಾಫ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಯಾಫ್ ಮಾದಕ ಪದಾರ್ಥಗಳ ವ್ಯಸನಿಯೂ ಆಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
The body of a 28-year-old man accused in a theft case was found at the Mudungarukatte bus stop in Baalepuni village on Monday. The deceased has been identified as Mohammad Niyaf, a resident of Pathuru. Police suspect that drug addiction may have caused his death.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am