ಬ್ರೇಕಿಂಗ್ ನ್ಯೂಸ್
14-10-25 10:13 pm Mangalore Correspondent ಕರಾವಳಿ
ಪುತ್ತೂರು, ಅ.14 : ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿದ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು.
ನಂದನ್ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಘಟನೆ ಅ.13ರಂದು ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ. ನಂದನ್ ಅವರು ಮಾರಿಷಸ್ ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
A tragic incident occurred in Mauritius where Nandan S. Bhat (25), a youth from Nadugallu Kallaje near Subrahmanya, slipped and fell into a waterfall, leading to his death.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm