ಬ್ರೇಕಿಂಗ್ ನ್ಯೂಸ್
21-10-25 03:07 pm Mangalore Correspondent ಕರಾವಳಿ
ಮಂಗಳೂರು, ಅ.21 : ನಮ್ಮ ಸರ್ಕಾರ ಆರ್‌ಎಸ್‌ಎಸ್ ಅನ್ನು ನಿಷೇಧ ಮಾಡಿಲ್ಲ. 2013ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಆದೇಶ ಮಾಡಿದ್ದನ್ನೇ ಪುನರುಚ್ಛರಿಸಿದ್ದೇವೆ. ಅದರಲ್ಲಿ ಆರೆಸ್ಸೆಸ್ ಎಂದು ಯಾವುದೇ ಉಲ್ಲೇಖ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಆಯಾ ಪ್ರದೇಶದ ಕಾನೂನು ಪರಿಸ್ಥಿತಿ ಆಧಾರದ ಮೇಲೆ ಅನುಮತಿ ನೀಡಲಾಗುವುದು ಎಂದು ಹೇಳಿದರು.
ಶಾಲೆ, ಸರ್ಕಾರಿ ಕಚೇರಿ ಆವರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ನಿರ್ಬಂಧ ಕುರಿತ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ಆರ್.ಎಸ್.ಎಸ್ ಬಗ್ಗೆ ನಿಷೇಧ ಆದೇಶ ಮಾಡಿಲ್ಲ. ಶಾಲಾ- ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಹೇಳಿದರು.
ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂಬುದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ? 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಕ್ಕೆ ಪೂರ್ವಾನುಮತಿ ಪಡೆಯಬೇಕೆಂದು ಆದೇಶ ಹೊರಡಿಸಿದ್ದರು.
ಜಗದೀಶ್ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಆದೇಶ ಮಾಡಿತ್ತು ತಾನಲ್ಲ, ಆರೆಸ್ಸೆಸ್ ಅಂತ ಇರಲಿಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಸುತ್ತೋಲೆ ಜಾರಿಗೊಳಿಸಲಾಗಿತ್ತು. ಇಲ್ಲ ಎನ್ನುವುದು ಹೇಗೆ. ಅವರು ಮಾಡಿದರೆ ಸರಿ ನಾವು ಮಾಡಿದರೆ ತಪ್ಪು ಅಂತ ಆಗುತ್ತಾ.. ಯಾವುದೇ ಸಂಘ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕು ಎಂದಿದೆ. ಆದರೆ ಶಾಂತಿ ಸುವ್ಯವಸ್ಥೆ ಪರಿಣಾಮಗಳನ್ನು ಯೋಚಿಸಿ ಅನುಮತಿ ನೀಡುವುದು, ನಿರಾಕರಿಸುವುದು ಸ್ಥಳೀಯಾಡಳಿತಕ್ಕೆ ಬಿಟ್ಟದ್ದು ಎಂದು ತಿಳಿಸಿದರು.
ಇದೇ ವೇಳೆ ಹೊಸ ಜಿಎಸ್‌ಟಿ ವ್ಯವಸ್ಥೆ ಕುರಿತು ಪ್ರಧಾನಿ ಮೋದಿಯವರನ್ನು ಟೀಕಿಸಿದ ಸಿಎಂ, ಕೇಂದ್ರವು 2017 ರಲ್ಲಿ ಜಿಎಸ್‌ಟಿ ವ್ಯವಸ್ಥೆಯನ್ನು ಪರಿಚಯಿಸಿತು. ಎಂಟು ವರ್ಷಗಳ ಕಾಲ ತೆರಿಗೆ ಸಂಗ್ರಹಿಸಿದ ನಂತರ ಈಗ ಜಿಎಸ್‌ಟಿ ದರಗಳನ್ನು ಕಡಿಮೆ ಮಾಡಿದ್ದಾರೆ. ಅದನ್ನು ದೀಪಾವಳಿ ಉಡುಗೊರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಜಿಎಸ್‌ಟಿ ಅನುಷ್ಠಾನದಿಂದಾಗಿ ಕರ್ನಾಟಕಕ್ಕೆ 1,500 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಿದರು.
Chief Minister Siddaramaiah clarified in Puttur that the Congress government in Karnataka has not banned the RSS, but merely reissued a 2013 circular introduced by the then BJP government under Jagadish Shettar. The order mandates that any organization seeking to conduct programs in school or government premises must obtain prior permission, without naming any specific group such as the RSS.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am