ಬ್ರೇಕಿಂಗ್ ನ್ಯೂಸ್
23-10-25 10:52 pm Mangalore Correspondent ಕರಾವಳಿ
ಮಂಗಳೂರು, ಅ.23 : ನಗರದ ಬಲ್ಮಠದಲ್ಲಿರುವ ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ಮತ್ತು ಜಪಾನ್ ದೇಶದ ಫ್ಯುಜಿಫಿಲ್ಮ್ ಸಂಸ್ಥೆಯ 128 ಸ್ಲೈಸ್ ಕಾರ್ಡಿಯಾಕ್ ಸಿಟಿ ಸ್ಕ್ಯಾನರ್, ಆಧುನಿಕ ರೇಡಿಯಾಲಜಿ ವಿಭಾಗ ಮತ್ತು ಎನ್ ಬಿಎಲ್ ಮಾನ್ಯತೆ ಪಡೆದ ಪ್ರಯೋಗಾಲಯದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸಿದರು.
ಸಂಸದ ಚೌಟ ಮಾತನಾಡಿ, ಪ್ರಥಮವಾಗಿ ರೋಗದ ಮೂಲವನ್ನು ಪತ್ತೆಹಚ್ಚುವ ಯಂತ್ರವನ್ನು ಲೋಕಾರ್ಪಣೆ ಮಾಡಿರುವುದಕ್ಕೆ ಎಸ್ ಸಿಎಸ್ ಆಸ್ಪತ್ರೆಯ ಆಡಳಿತವನ್ನು ಅಭಿನಂದಿಸುತ್ತೇನೆ. ಇದೊಂದು ಉತ್ತಮ ಹೆಜ್ಜೆಯಾಗಿದ್ದು ರೋಗದ ಮೂಲವನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಿದರೆ ರೋಗ ವಾಸಿಯಾಗುತ್ತದೆ. ಕೆಲವು ಸಂದರ್ಭದಲ್ಲಿ ರೋಗದ ಮೂಲ ಪತ್ತೆಮಾಡದೆ ತಪ್ಪಾಗಿ ಚಿಕಿತ್ಸೆ ಮಾಡಿದರೆ ಸಮಸ್ಯೆಯಾಗುತ್ತದೆ. ಆ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ಇಲ್ಲಿನ ವೈದ್ಯರು ಮಾದರಿ ಒಂದನ್ನು ಸೃಷ್ಟಿಸಿದ್ದಾರೆ ಎಂದರು.






ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದ ಸ್ವಾಮೀಜಿ, ಎಸ್ ಸಿಎಸ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದ್ದು ಸಂಸ್ಥೆಯಲ್ಲಿ ಸೇವಾ ನಿರತರ ಸೇವೆ ಅತ್ಯುತ್ತಮವಾಗಿದೆ ಎಂದರು. ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರು ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳಿಂದಾಗಿ ಹಬ್ ಆಗುತ್ತಿದ್ದು ಮುಂದೆ ವಿದೇಶದ ಜನರು ಚಿಕಿತ್ಸೆಗಾಗಿ ಮಂಗಳೂರು ಬರುವ ದಿನ ದೂರವಿಲ್ಲ. ಆಗ ಮಂಗಳೂರು ಮೆಡಿಕಲ್ ಟೂರಿಸಂ ಹಬ್ ಆಗಲಿದೆ ಎಂದರು.
ಫ್ಯುಜಿಫಿಲ್ಮ್ ಜಪಾನ್ ಸಂಸ್ಥೆ ನಿರ್ಮಿಸಿದ 128 ಸ್ಲೈಸ್ ಸಿನೇರಿಯಾ ವ್ಯೂ ಕಾರ್ಡಿಯಾಕ್ ಸಿಟಿ ಸ್ಕ್ಯಾನರ್, ಆಧುನಿಕ ರೇಡಿಯಾಲಜಿ ವಿಭಾಗ ರೋಗ ಪತ್ತೆಹಚ್ಚುವಲ್ಲಿ ಪ್ರಧಾನ ಪಾತ್ರ ನಿರ್ವಹಿಸಲಿದ್ದು ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಲಿದೆ ಎಂದು ವೈದ್ಯರು ವಿಶ್ವಾಸ ವ್ಯಕ್ತಪಡಿಸಿದರು. ಹಿರಿಯ ನರರೋಗ ತಜ್ಞ ಡಾ.ಐ.ಜಿ ಭಟ್, ಸಿಟಿ ಆಸ್ಪತ್ರೆಯ ಸಿಎಂಡಿ ಡಾ.ಭಾಸ್ಕರ ಶೆಟ್ಟಿ, ಫ್ಯುಜಿಫಿಲ್ಮ್ ಸಂಸ್ಥೆಯ ಡಾ.ನಾಗರಾಜ ಕೆಂಪಯ್ಯ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಸುನಿಲ್ ಆಚಾರ್, ಸಾಯಿರಾಂ, ರವಿಶಂಕರ ಮಿಜಾರ್. ಎಂಬಿ ಪುರಾಣಿಕ್ ಮತ್ತಿತರರು ಇದ್ದರು.
ಎಸ್ ಸಿಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಜೀವರಾಜ ಸೊರಕೆ ಅಧ್ಯಕ್ಷತೆ ವಹಿಸಿದ್ದರು. ಕ್ಲಿನಿಕಲ್ ಡೈರೆಕ್ಟರ್ ಡಾ.ಚಂದ್ರಶೇಖರ್ ಸೊರಕೆ ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಡಾ.ಮಲ್ಲಿಕಾರ್ಜುನ ಪ್ರಸ್ತಾವನೆ ಮಾಡಿ, ಶ್ರೀಮತಿ ಸ್ನೇಹ ಕಾರ್ಯಕ್ರಮ ನಿರೂಪಿಸಿದರು.
Mangaluru’s SCS Hospital in Balmatta celebrated its 38th anniversary with the inauguration of a state-of-the-art 128-slice Cardiac CT Scanner from Japan’s Fujifilm, along with an advanced radiology department and NABL-accredited laboratory. The ceremony was inaugurated by Dakshina Kannada MP Captain Brijesh Chowta, who praised the hospital’s efforts in advancing diagnostic technology for early disease detection and effective treatment.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am