ಬ್ರೇಕಿಂಗ್ ನ್ಯೂಸ್
25-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.25: ಧರ್ಮಸ್ಥಳದಲ್ಲಿ ಹೆಣ ಹೂತ ಆರೋಪದ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಒಂದೆಡೆ ರಾಜ್ಯ ಸರ್ಕಾರ ಇದೇ ತಿಂಗಳ ಒಳಗಡೆ ತನಿಖೆ ಮುಗಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಸೌಜನ್ಯಾ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಲ್ವರಿಗೆ ಎಸ್ಐಟಿ ವಿಚಾರಣೆಗೆ ಕರೆದಿದ್ದು, ತಪ್ಪಿದಲ್ಲಿ ಬಂಧನ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಅ.27ರಂದು ಬೆಳಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ವಿಚಾರಣೆ ಎದುರಿಸಬೇಕು ಎಂದು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ ಗೌಡ ಅವರಿಗೆ ನೋಟಿಸ್ ನೀಡಲಾಗಿದೆ. ಅ.24ರಂದು ಈ ನೋಟಿಸ್ ಜಾರಿಯಾಗಿದ್ದು, ನಾಲ್ವರಿಗೂ ಏಕಕಾಲದಲ್ಲಿ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ.
ನೋಟೀಸಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಮುಂದೆ ಯಾವತ್ತೂ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು, ಪೊಲೀಸರಿಗೆ ಹೇಳಿಕೆ ನೀಡದಂತೆ ಯಾರಿಗೂ ಒತ್ತಡ ಹೇರಬಾರದು, ಸಾಕ್ಷ್ಯ ನಾಶ ಮಾಡಬಾರದು ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ. ಈಗಾಗಲೇ ಮಹೇಶ್ ಶೆಟ್ಟಿ ಮತ್ತು ಗಿರೀಶ್ ಮಟ್ಟಣ್ಣನವರ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅದರ ವಿಚಾರಣೆಯೂ ಬಾಕಿ ಇದೆ. ಎಸ್ಐಟಿ ತನಿಖೆ ನಿಟ್ಟಿನಲ್ಲಿ ಈ ಹಿಂದೆಯೂ ನೋಟೀಸ್ ಜಾರಿ ಮಾಡಲಾಗಿತ್ತು. ಮಹೇಶ್ ಶೆಟ್ಟಿ ಬಿಟ್ಟು ಇತರರು ಹಲವು ಬಾರಿ ವಿಚಾರಣೆಗೆ ಹಾಜರಾಗಿದ್ದು ಹೇಳಿಕೆಯನ್ನೂ ನೀಡಿದ್ದರು.
ಇದೀಗ ಎಸ್ಐಟಿ ಮುಂದಿನ ವಾರ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಿದೆ ಎನ್ನಲಾಗುತ್ತಿದ್ದು, ಇದರ ನಡುವೆಯೇ ಪಿತೂರಿ ಆರೋಪಕ್ಕೀಡಾದ ನಾಲ್ವರಿಗೆ ತನಿಖೆ ಸಲುವಾಗಿ ನೋಟಿಸ್ ಜಾರಿ ಮಾಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರಿಗೆ ಗಡೀಪಾರು ಮಾಡಲು ಸಿದ್ಧತೆ ನಡೆದಿದ್ದರೂ ಹೈಕೋರ್ಟ್ ತಡೆ ನೀಡಿರುವುದರಿಂದ ಸದ್ಯಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಎಸ್ಐಟಿ ನೋಟೀಸ್ ನೀಡಿರುವುದು ಮತ್ತು ಅದರ ಜೊತೆಗೆ ತನಿಖೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಹೇಳಿರುವುದು ಕುತೂಹಲ ಮೂಡಿಸಿದೆ. ಇದೇ ವೇಳೆ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಗೆ ಬಂದಿದ್ದು, ತನಿಖಾ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
The Dharmasthala buried-body case has reached a crucial stage, with the Special Investigation Team (SIT) nearing completion of its inquiry as per state government directives to submit the final report this month.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am