ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ; ಮೂರು ತಿಂಗಳಲ್ಲಿ 4793 ಪ್ರಕರಣ, 23 ಲಕ್ಷ ದಂಡ ಸಂಗ್ರಹ 

31-10-25 09:00 pm       Mangalore Correspondent   ಕರಾವಳಿ

ಮಂಗಳೂರು ನಗರದಲ್ಲಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವವರ ವಿರುದ್ಧ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ನೋ ಪಾರ್ಕಿಂಗ್ ವಾಹನ ನಿಲುಗಡೆ ಮಾಡಿದ್ದ ಮಾಲೀಕ, ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿದ್ದು ಒಟ್ಟು 23,21,200 ರೂ. ದಂಡ ವಿಧಿಸಲಾಗಿದೆ ಎಂದು ಮಂಗಳೂರು ನಗರ ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ತಿಳಿಸಿದ್ದಾರೆ. 

ಮಂಗಳೂರು, ಅ.31 : ಮಂಗಳೂರು ನಗರದಲ್ಲಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವವರ ವಿರುದ್ಧ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ನೋ ಪಾರ್ಕಿಂಗ್ ವಾಹನ ನಿಲುಗಡೆ ಮಾಡಿದ್ದ ಮಾಲೀಕ, ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿದ್ದು ಒಟ್ಟು 23,21,200 ರೂ. ದಂಡ ವಿಧಿಸಲಾಗಿದೆ ಎಂದು ಮಂಗಳೂರು ನಗರ ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಗರದ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಮೂರು ತಿಂಗಳುಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನೋ‌ ಪಾರ್ಕಿಂಗ್, ಪಾದಚಾರಿ ಮಾರ್ಗದ ಮೇಲೆ ವಾಹನ ನಿಲುಗಡೆ ಸೇರಿದಂತೆ ಅನಧಿಕೃತ ವಾಹನ ನಿಲುಗಡೆ ಮಾಡಿದ್ದ ವಾಹನಗಳ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಲಾಗಿದೆ. 23,21,200 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಹೇಳಿದರು. ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಅಪಘಾತಗಳಾಗುವ ಬ್ಲ್ಯಾಕ್ ಸ್ಪಾಟ್ ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ವೇಗವಾಗಿ ಚಾಲನೆ ಮಾಡುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮಾದರಿಯಲ್ಲಿ 562 ಪ್ರಕರಣಗಳನ್ನು ದಾಖಲಿಸಿದ್ದು ₹5.62 ಲಕ್ಷ ದಂಡ ವಿಧಿಸಲಾಗಿದೆ. ಟಿಂಟೆಡ್ ಗ್ಲಾಸ್ ಉಪಯೋಗಿಸಿದ 5865 ವಾಹನಗಳನ್ನು ಗುರುತಿಸಿ ₹24.85 ಲಕ್ಷ ದಂಡ ವಿಧಿಸಲಾಗಿದೆ ಎಂದರು. 

ಇದಲ್ಲದೆ, ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರ ನಡುವಿನ ಅವಧಿಯಲ್ಲಿ ಕಳ್ಳತನವಾಗಿದ್ದ 233 ಮೊಬೈಲ್ ಫೋನ್ ಗಳನ್ನು ವಶಪಡಿಸಿ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್.ಎನ್ ತಿಳಿಸಿದ್ದಾರೆ.

The Mangaluru City Police have intensified their action against illegal and no-parking violations across the city. In the past three months, police have registered 4,793 cases against vehicle owners and drivers for parking in “No Parking” zones and have collected a total of ₹23,21,200 in fines, said DCP (Traffic) Ravishankar.