ಬ್ರೇಕಿಂಗ್ ನ್ಯೂಸ್
07-11-25 10:58 pm Mangalore Correspondent ಕರಾವಳಿ
ಮಂಗಳೂರು, ನ.7 : ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧಿಸಿ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಇದೀಗ ತಜ್ಞರ ಜಂಟಿ ಕಾರ್ಯಕಾರಿ ಸಮಿತಿ(Joint Working Group)ಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬೆಂಗಳೂರು -ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೇ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಕ್ಯಾ. ಚೌಟ ಅವರು ಕೇಂದ್ರ ಹೆದ್ದಾರಿ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಕ್ಯಾ. ಚೌಟ ಅವರ ಕೋರಿಕೆಗೆ ಸ್ಪಂದಿಸಿ ಹೆದ್ದಾರಿ ಸಚಿವಾಲಯವು ತಜ್ಞರ ಜಂಟಿ ಕಾರ್ಯಕಾರಿ ಸಮಿತಿ ರಚನೆ ಮಾಡಿದೆ.

ರೈಲ್ವೆ ಇಲಾಖೆಯೊಂದಿಗೆ ಶಿರಾಡಿ ಘಾಟ್ ಪ್ರದೇಶದ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ನೇಮಿಸುವ ಕುರಿತು ಪರಿಶೀಲಿಸಲಾಗಿದ್ದು, ಹೆದ್ದಾರಿ ಸಚಿವಾಲಯ, ರೈಲ್ವೇ ಸಚಿವಾಲಯ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಒಳಗೊಂಡ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ತಜ್ಞರ ಸಮಿತಿಯು ಶಿರಾಡಿ ಘಾಟ್ ಪ್ರದೇಶದಲ್ಲಿ ರೈಲು ಮತ್ತು ರಸ್ತೆ ಸಂಪರ್ಕಿತ ಸುರಂಗ ಮಾರ್ಗದ ಸಾಧ್ಯತೆ ಹಾಗೂ ಸಾಧಕ- ಬಾಧಕಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದೆ ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕ್ಯಾ.ಚೌಟ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಚೌಟ
ಶಿರಾಡಿ ಘಾಟಿಯಲ್ಲಿ ರೈಲ್ವೇ ಮತ್ತು ಹೆದ್ದಾರಿ ಜಂಟಿ ಸಮೀಕ್ಷೆಗಾಗಿ ತಜ್ಞರ ಜಂಟಿ ಸಮಿತಿ ರಚನೆ ಮಾಡಿರುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಸಂಬಂಧ ದಕ್ಷಿಣ ಕನ್ನಡ ಜನರ ಬಹುದಿನದ ಕನಸು ನನಸಾಗುವ ಮೊದಲ ಹೆಜ್ಜೆಯಾಗಿದೆ. ಶಿರಾಡಿ ಘಾಟಿ ಪ್ರದೇಶದ ಪರಿಸರ ಸೂಕ್ಷ್ಮ ಮತ್ತು ಭೌಗೋಳಿಕ ಸಂಕೀರ್ಣ ಗಮನದಲ್ಲಿಟ್ಟು ಈ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ಜಂಟಿ ಸಮೀಕ್ಷೆ ಕೈಗೊಳ್ಳಲು ಮತ್ತು ಡಿಪಿಆರ್ ಮೇಲ್ವಿಚಾರಣೆಗೆ ತಜ್ಞರ ಸಮಿತಿ ನೇಮಿಸುವಂತೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರೈಲ್ವೇ ಮತ್ತು NHAI ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿದ್ದಾರೆ. ಇಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮಿತಿಯು ರಸ್ತೆ ಮತ್ತು ರೈಲು ಸುರಂಗ ಮಾರ್ಗದ ಕಾರ್ಯ ಸಾಧ್ಯತೆಯನ್ನು ಪರಿಶೀಲಿಸಲಿದೆ. ಇದರೊಂದಿಗೆ ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಡಿಪಿಆರ್ ಪ್ರಕ್ರಿಯೆ ಚುರುಕುಗೊಳ್ಳಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
In a major step toward the Bengaluru–Mangaluru High-Speed Corridor, the Central Government has formed a Joint Working Group (JWG) of experts to conduct a comprehensive survey for the development of both the railway and highway through the Shiradi Ghat, including the possibility of a tunnel route.
30-01-26 11:55 am
HK News Desk
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm