ಬ್ರೇಕಿಂಗ್ ನ್ಯೂಸ್
15-11-25 12:12 pm Mangalore Correspondent ಕರಾವಳಿ
ಮಂಗಳೂರು, ನ.15 : ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಇನ್ನೋವಾ ಕಾರು ಬಿಸಿ ರೋಡ್ ಬಳಿ ಹೆದ್ದಾರಿ ಮಧ್ಯೆ ಸರ್ಕಲ್ ಗೆ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64), ರಮ್ಯ (23) ಹಾಗೂ ನಂಜಮ್ಮ ( 75) ಮೃತರು. ಇವರೊಂದಿಗಿದ್ದ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಗಂಭೀರ ಗಾಯಗೊಂಡಿದ್ದಾರೆ. ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.





ರವಿ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಒಂಬತ್ತು ಮಂದಿಯಲ್ಲಿ ರಮ್ಯಾ ಅವರು ಬೆಂಗಳೂರಿನ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಎಂಬ ಮಾಹಿತಿ ಇದೆ. ಮುಂಜಾನೆ ಸುಮಾರು 4.40ರ ಸಮಯದಲ್ಲಿ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ನೇತ್ರಾವತಿ ಸೇತುವೆ ದಾಟಿ ಬಿ.ಸಿ.ರೋಡಿಗೆ ತಲುಪುವ ಮೊದಲೇ ಹೆದ್ದಾರಿ ಮಧ್ಯದಲ್ಲಿರುವ ಸರ್ಕಲ್ ಗೆ ಡಿಕ್ಕಿ ಹೊಡೆದಿದ್ದು ಮುಂಭಾಗ ನಜ್ಜುಗುಜ್ಜಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವೈಜ್ಞಾನಿಕ ಮಾದರಿಯ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಬಿಸಿರೋಡು - ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಬೆಳ್ತಂಗಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ದೊಡ್ಡದಾಗಿ ಸರ್ಕಲ್ ಮಾಡಿದ್ದು ವೇಗವಾಗಿ ಬರುವ ವಾಹನಗಳಿಗೆ ಅಡ್ಡಿಯಾಗಿ ಪರಿಣಮಿಸಿದೆ. ಅಪಘಾತದ ಬಗ್ಗೆ ಬಂಟ್ವಾಳ ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three people from the same Bengaluru family tragically died on the spot after their Innova car crashed into a traffic circle located in the middle of the highway near BC Road. The deceased have been identified as Ravi (64), Ramya (23), and Nanjamma (75) — all residents of Peenya, Bengaluru. Keerthi, Sushila, Bindu, and Prashanth, who were travelling with them, sustained severe injuries. The driver Subrahmanya and another passenger Kiran escaped with minor injuries.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am