ಬ್ರೇಕಿಂಗ್ ನ್ಯೂಸ್
16-11-25 10:48 pm Mangalore Correspondent ಕರಾವಳಿ
ಉಳ್ಳಾಲ, ನ.16 : ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೋರ್ವ ತಾನು ನೆಲೆಸಿದ್ದ ಪಿಜಿಯಿಂದ ನಾಪತ್ತೆಯಾಗಿದ್ದು, ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಲಕ್ಷಾಂತರ ರೂಪಾಯಿ ಕಳಕೊಂಡ ಹಿನ್ನಲೆಯಲ್ಲಿ ಮನನೊಂದು ನಾಪತ್ತೆಯಾಗಿರುವ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ತಿಳಿದುಬಂದಿದೆ.
ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ರಾಬಿಯಾ- ಅಬೂಬಕರ್ ದಂಪತಿಯ ಪುತ್ರ ಮಾಲೀಕ್ ಅಬೂಬಕರ್(19)ನಾಪತ್ತೆಯಾದ ವಿದ್ಯಾರ್ಥಿ. ಮಾಲೀಕ್ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅಲ್ಲೇ ಸಮೀಪದ ಶರೀಫ್ ಎಂಬವರ ಪಿಜಿಯಲ್ಲಿ ವಾಸವಾಗಿದ್ದ. ನ.13ರಂದು ರಾತ್ರಿ ಡಿನ್ನರ್ ಮಾಡಿ ಬರುತ್ತೇನೆಂದು ಹೇಳಿ ಪಿಜಿಯಿಂದ ಸ್ಕೂಟರಲ್ಲಿ ತೆರಳಿದ ಮಾಲೀಕ್ ಮತ್ತೆ ಹಿಂತಿರುಗದೆ ನಾಪತ್ತೆ ಆಗಿದ್ದಾನೆ. ಈ ಬಗ್ಗೆ ಮಾಲೀಕ್ ಮಾವ (ತಾಯಿಯ ತಮ್ಮ) ಫಿಸಿಯೋಥೆರಫಿ ವೈದ್ಯ ಅಝ್ಮಲ್ ಟಿ.ಎ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಮಾಲೀಕ್ ನ ಸ್ಕೂಟರ್ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ದೆಹಲಿಗೆ ತೆರಳುವ ಮಂಗಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಲೀಕ್ ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಮೂರು ಲಕ್ಷ ಹಣವನ್ನು ಕಳೆದುಕೊಂಡಿದ್ದು ಆ ಕಾರಣದಿಂದಲೇ ಮನನೊಂದು ನಾಪತ್ತೆಯಾಗಿದ್ದಾನೆಂದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
A Kerala-origin student studying at a private medical college in Deralakatte has gone missing from his PG accommodation. Preliminary police investigation has revealed that he had reportedly lost several lakhs of rupees through an online gaming app and was mentally disturbed before disappearing.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm