ಬ್ರೇಕಿಂಗ್ ನ್ಯೂಸ್
17-11-25 06:16 pm Mangalore Correspondent ಕರಾವಳಿ
ಮಂಗಳೂರು, ನ.17 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿ ಮಹತ್ವದ ಆದೇಶ ನೀಡಿದೆ. ಅಲ್ಲದೇ, ಗಡೀಪಾರು ಅಗತ್ಯವಿದ್ದರೆ ಸೂಕ್ತ ಕಾರಣ ಮತ್ತು ನಿಗದಿತ ಸೆಕ್ಷನ್ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಮರು ಆದೇಶ ನೀಡಲು ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.
ಸೌಜನ್ಯಾ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಕಳೆದ ಸೆಪ್ಟೆಂಬರ್ 20ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.
ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ನಿರಂತರ ವಿಚಾರಣೆಯ ಬಳಿಕ ನ್ಯಾ. ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠವು ಮೇಲಿನಂತೆ ಆದೇಶ ಮಾಡಿದೆ. ವಿಚಾರಣೆ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರ 15 ದಿನದ ಒಳಗಡೆ ಆದೇಶ ನೀಡಲು ಪುತ್ತೂರು ಎಸಿಗೆ ಹೈಕೋರ್ಟ್ ಅವಕಾಶ ನೀಡಿದೆ.
ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದು ಅವರನ್ನು ಇಲ್ಲಿಯೇ ಉಳಿಸಿಕೊಂಡರೆ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತದೆ ಎಂದು ಬೆಳ್ತಂಗಡಿ ಪೊಲೀಸರು ನೀಡಿದ್ದ ವರದಿ ಆಧರಿಸಿ ಪುತ್ತೂರು ಉಪ ವಿಭಾಗಾಧಿಕಾರಿ ಗಡೀಪಾರು ಆದೇಶ ಮಾಡಿದ್ದರು. ಇದೀಗ ಹೈಕೋರ್ಟ್ ಗಡೀಪಾರು ಆದೇಶ ರದ್ದುಗೊಳಿಸಿ ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕೆ ರಿಲೀಫ್ ನೀಡಿದೆ.
In a significant judgment, the Karnataka High Court has quashed the deportation order issued against Soujanya-case activist Mahesh Shetty Timarodi, who had earlier been banished to Manvi in Raichur district for one year by the Puttur Sub-Divisional Magistrate. The court directed the Puttur SDM to conduct a fresh inquiry, provide valid legal grounds, cite relevant sections, and issue a new order within 15 days if deportation is still deemed necessary.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am