ಬ್ರೇಕಿಂಗ್ ನ್ಯೂಸ್
22-11-25 05:46 pm Mangalore Correspondent ಕರಾವಳಿ
ಮಂಗಳೂರು, ನ.22 : ರಾಜ್ಯ ಕಾಂಗ್ರೆಸಿನಲ್ಲಿ ಸಿಎಂ ಬದಲಾವಣೆಯ ಸುದ್ದಿ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಆಪ್ತ ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸುತ್ತಿದ್ದಾರೆ. ಡಿಕೆಶಿ ಬಣ ದೆಹಲಿಯಲ್ಲಿ ಬೀಡು ಬಿಟ್ಟಿದ್ದರೆ, ಸಿದ್ದರಾಮಯ್ಯ ಬಣ ಬೆಂಗಳೂರಿನಲ್ಲೇ ಮುಂದಿನ ನಡೆ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ನಡುವೆ, ಮಂಗಳೂರಿಗೆ ಬಂದಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಕೋಣಾಜೆ ಮಂಗಳೂರು ವಿವಿ ಆವರಣದಲ್ಲಿ ಡಿ.3ರಂದು ನಡೆಯುವ ಗಾಂಧಿ- ನಾರಾಯಣ ಗುರು ಸಂವಾದ ಶತಾಬ್ದಿ ಕಾರ್ಯಕ್ರಮದ ನಿಮಿತ್ತ ಸುದ್ದಿಗೋಷ್ಟಿ ನಡೆಸಿದ ಹರಿಪ್ರಸಾದ್ ಅವರಲ್ಲಿ ಅಧಿಕಾರ ಹಸ್ತಾಂತರ ಜಟಾಪಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಬರಲಿದ್ದು ಸಮಾವೇಶದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಅಧಿಕಾರ ಹಸ್ತಾಂತರ ಬಗ್ಗೆ ಕೇಳಿದ್ದಕ್ಕೆ, ಆ ಬಗ್ಗೆ ನಮಗೇನೂ ಗೊತ್ತಿಲ್ಲ. ಖರ್ಗೆ ಸಾಹೇಬರು ಬೆಂಗಳೂರಿನಲ್ಲಿ ಇದ್ದಾರೆ. ಅವರಲ್ಲಿ ಕೇಳಿದರೆ ಹೇಳಬಹುದು ಎಂದರು. ರಾಜಕೀಯ ವಿಚಾರ ಮಾತನಾಡಲ್ಲ. ನಾವು ನಾರಾಯಣ ಗುರುಗಳು ಮತ್ತು ಗಾಂಧೀಜಿಯವರು ಜೊತೆಗೂಡಿ ಮಾತುಕತೆ ನಡೆಸಿದ ವಿಚಾರದಲ್ಲಿ ಶತಾಬ್ದಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಪಕ್ಷ ಭೇದ ರಹಿತ ಕಾರ್ಯಕ್ರಮ ಇದಾಗಿದ್ದು ಸ್ವಾಮೀಜಿಗಳು ಸೇರಿದಂತೆ ಎಲ್ಲ ಪಕ್ಷಗಳ ಪ್ರಮುಖರು ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಡಿಕೆ ಶಿವಕುಮಾರ್ ತಮ್ಮ ಪರವಾಗಿರುವ ಶಾಸಕರ ಜೊತೆಗೆ ಮಾತುಕತೆ ನಡೆಸುತ್ತಿದ್ದು, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕಾಗಿ ಜೈಲಿನಲ್ಲಿರುವ ಶಾಸಕರಾದ ವೀರೇಂದ್ರ ಪಪ್ಪಿ, ವಿನಯ ಕುಲಕರ್ಣಿ ಅವರನ್ನೂ ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ಮೂರು ಗಂಟೆ ಕಾಲ ಚರ್ಚಿಸಿದ್ದಾರೆ. ಇದೇ ವೇಳೆ, ಡಿಕೆಶಿ ಪರವಾಗಿರುವ ಕೆಲವು ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.
Senior Congress leader BK Hariprasad clarified in Mangaluru that Chief Minister Siddaramaiah will continue in his position despite ongoing speculation about a leadership change within the Karnataka Congress. He explained that Siddaramaiah will attend the Gandhi–Narayana Guru Centenary Dialogue event at Konaje on December 3 as the Chief Minister and deliver the keynote address.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm