ಬ್ರೇಕಿಂಗ್ ನ್ಯೂಸ್
03-12-25 07:23 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅವಶ್ಯಕತೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿ ಭಾಗದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರಾವಳಿ ಭಾಗದ ಜನರಿಗೆ ಕ್ಷಿಪ್ರಗತಿಯಲ್ಲಿ ನ್ಯಾಯ ದೊರೆಯುವಂತಾಗಲು ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚೆ ನಡೆಸುತ್ತೇನೆ. ಅವರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ, ಪ್ರಧಾನ ಸರಕಾರಿ ಅಭಿಯೋಜಕ ಎಂ.ಪಿ ನರೋನ್ಹ, ಟಿ.ಎನ್ ಪೂಜಾರಿ, ಎಂ.ಆರ್ ಬಲ್ಲಾಳ್, ಎಂ. ಯಶವಂತ ಮರೋಳಿ, ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಜೊತೆ ಕಾರ್ಯದರ್ಶಿ ಶ್ರೀಮತಿ ಜ್ಯೋತಿ, ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿಕೋಸ್ಟ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಮೂಡುಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಸುಮನಾ ಶರಣ್, ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು.
Chief Minister Siddaramaiah has assured that the demand for establishing a mobile High Court bench in Mangaluru will be taken up seriously and discussed with the Chief Justice of the Karnataka High Court.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm