ಬ್ರೇಕಿಂಗ್ ನ್ಯೂಸ್
06-12-25 06:12 pm Mangalore Correspondent ಕರಾವಳಿ
ಪುತ್ತೂರು, ಡಿ.6 : ತಡರಾತ್ರಿ ವೇಳೆ ಅಕ್ರಮವಾಗಿ ಮನೆಯೊಂದಕ್ಕೆ ನುಗ್ಗಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಸದ್ರಿ ವ್ಯಕ್ತಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯ ಸಮೀಪದ ಸಹೋದರ ಹರೀಶ ಗೌಡರ ಮನೆಗೆ ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಈ ವೇಳೆ ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದರು. ಆದರೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ.
ಈ ವೇಳೆ ವ್ಯಕ್ತಿಯನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಎಂಬುದಾಗಿ ತಿಳಿದು ಬಂದಿತ್ತು. ರಾಜು ನಾಯ್ಕ ತಡರಾತ್ರಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆರೋಪಿ ರಾಜು ನಾಯ್ಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಕ್ಷಣದಿಂದಲೇ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
A head constable from the Kadaba Police Station, Raju Naik, was arrested after he allegedly illegally entered a house late at night and assaulted a family member. The incident took place in Koyila, Kadaba taluk.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm