ಬ್ರೇಕಿಂಗ್ ನ್ಯೂಸ್
07-12-25 03:02 pm Mangalore Correspondent ಕರಾವಳಿ
ಮಂಗಳೂರು, ಡಿ.7 : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಳಿಕ ದೆಹಲಿ ಆರ್ಥಿಕ ಅಪರಾಧ ಪೊಲೀಸರು ಡಿಕೆಶಿ ಆಪ್ತ ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಆಲಿ ಅವರಿಗೂ ನೊಟೀಸ್ ಜಾರಿ ಮಾಡಿದ್ದಾರೆ.
ಕೆಪಿಸಿಸಿ ಸೆಕ್ರೆಟರಿ ಆಗಿರುವ ಇನಾಯತ್ ಆಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ತನಿಖೆಗೆ ಹಾಜರಾಗುವಂತೆ ನೊಟೀಸ್ ಜಾರಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್ಐಆರ್ ದಾಖಲಿಸಿತ್ತು. ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಸೋದರ ಡಿಕೆ ಸುರೇಶ್ ಗೆ ನೊಟೀಸ್ ಜಾರಿಯಾಗಿತ್ತು.
ಸದ್ಯ ಡಿಕೆಶಿ ಜೊತೆಗೆ ವ್ಯವಹಾರ ಪಾಲುದಾರಿಕೆ ಹೊಂದಿರುವ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದದೊಳಗೆ ತನಿಖೆಗೆ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೋಟಿಸ್ ನೀಡಿ ಹೋಗಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಇನಾಯತ್ ಅಲಿ ತನಿಖೆಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ದೆಹಲಿ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ತನಿಖೆಗೆ ಕರೆದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂಬ ಮಾಹಿತಿ ಇದ್ದು ಈಗ ಸಂಕಷ್ಟ ಎದುರಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸಿನಿಂದ ಸ್ಪರ್ಧಿಸಿ ಇನಾಯತ್ ಆಲಿ ಪರಾಜಿತರಾಗಿದ್ದರು. ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ ದೇಣಿಗೆ ಬಗ್ಗೆ ಪ್ರಮಾಣಪತ್ರ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಯಾವ ರೀತಿಯಲ್ಲಿ ದೇಣಿಗೆ ಕೊಡಲಾಗಿದೆ ಮತ್ತು ಈ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದು ಗೊತ್ತಿದೆಯೇ ಎಂಬ ವಿವರಗಳನ್ನು ಕೇಳಿ ನೊಟೀಸ್ ನೀಡಿದ್ದಾರೆ.
In the ongoing National Herald case, the Delhi Police’s Economic Offences Wing (EOW) has now issued a notice to Inayat Ali, a close associate of Karnataka Deputy Chief Minister DK Shivakumar and KPCC Secretary. The notice was personally delivered to Ali at his Mangaluru residence, directing him to appear before investigators within a week.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm