ಬ್ರೇಕಿಂಗ್ ನ್ಯೂಸ್
20-12-25 01:09 pm Mangalore Correspondent ಕರಾವಳಿ
ಉಳ್ಳಾಲ, ಡಿ.20 : ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣ ಬಾವಿಯಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದು, ಅನಾರೋಗ್ಯದಿಂದ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ನಿನ್ನೆ ಸಂಜೆ ಪ್ರಭಾಕರ್ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು. ಬಳಿಕ ಪತ್ನಿ ಮತ್ತು ಮಗನ ಜೊತೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಈ ವೇಳೆ ಪತ್ನಿ ಪ್ರಭಾಕರ್ ಅವರನ್ನ ಹುಡುಕಾಡಿದಾಗ ಅವರ ಶವ ಮನೆ ಆವರಣದ ಬಾವಿಯಲ್ಲಿ ಪತ್ತೆಯಾಗಿದೆ.
ಮೃತ ಪ್ರಭಾಕರ ಜೋಗಿಯವರು ನರ ದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಶುಕ್ರವಾರ ಬೆಳಗ್ಗಿನಿಂದಲೇ ಅವರು ಮಂಕಾಗಿದ್ದು ಆರೋಗ್ಯ ಸಮಸ್ಯೆಯಿಂದಲೇ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಪ್ರಭಾಕರ ಅವರು ಈ ಹಿಂದೆಯೂ ಒಮ್ಮೆ ಮನೆಯಿಂದ ನಾಪತ್ತೆಯಾಗಿದ್ದು ಬಳಿಕ ಮನೆಗೆ ಹಿಂದಿರುಗಿದ್ದರು. ಅವರು ಉಳ್ಳಾಲ ತಾಲೂಕಿನ ಹಲವು ಶಾಲೆಗಳಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ದೈಹಿಕ ಶಿಕ್ಷಕರ ಸಂಘಟನೆಗಳಲ್ಲಿಯೂ ಸಕ್ರಿಯರಾಗಿದ್ದರು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ.
In a tragic incident, Prabhakar Jogi (51), a physical education teacher at the Government School in Kallarakkodi, Naringana village, was found dead in the well of his house in Kondana, under the Kotekar town limits on Friday evening. Police suspect suicide due to health-related distress.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am