ಬ್ರೇಕಿಂಗ್ ನ್ಯೂಸ್
21-12-25 11:04 pm Mangalore Correspondent ಕರಾವಳಿ
ಬಂಟ್ವಾಳ, ಡಿ.21 : ಕೇಪು ಜಾತ್ರೆಯ ನಿಮಿತ್ತ ಎರಡನೇ ದಿನ ಭಾನುವಾರವೂ ವಿಟ್ಲ ಪೊಲೀಸರು ದಾಳಿ ನಡೆಸಿದ್ದು 20 ಕೋಳಿಗಳನ್ನು ಸ್ವಾಧೀನಪಡಿಸಿ, 27 ಜನರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ ಬೆಳಗ್ಗೆ ಮುರಳೀಧರ ರೈ ಎಂಬವರಿಗೆ ಸೇರಿದ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು, ಠಾಣಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಲವಾರು ಜನ ಸೇರಿ ಹಿಂಸಾತ್ಮಕವಾಗಿ ಕೋಳಿ ಅಂಕ ಆಡುತ್ತಿರುವುದು ಕಂಡುಬಂದಿರುತ್ತದೆ. ಅಲ್ಲಿ ನೆರೆದಿದ್ದ ಜನರಿಗೆ ಅಕ್ರಮ ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡಿದರೂ, ಸೇರಿದ್ದ ಜನರು ಸ್ಥಳದಿಂದ ತೆರಳದೇ ನಿಂತುಕೊಂಡಿರುತ್ತಾರೆ
ಅಲ್ಲದೆ, ಸ್ಥಳದಲ್ಲಿ ಹಾಜರಿದ್ದ ಬಿಜೆಪಿ ಮುಖಂಡರಾದ ಸಂಜೀವ ಮಠಂದೂರು, ಮುರಳೀಧರ ರೈ, ಸತೀಶ ಕುಂಪಲ, ದಯಾನಂದ ಉಜಿರೆಮಾರು, ಹರಿಪ್ರಸಾದ್ ಯಾದವ್, ಅಶೋಕ ಶೆಟ್ಟಿ ವಿಟ್ಲ, ರಾಜೇಶ್ ಬಾಳೆಕಲ್ಲು ಎಂಬವರುಗಳು ಅಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿರುತ್ತಾರೆ. ಬಳಿಕ ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 20 ಜನರನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ 20 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿ (ಬಾಲು)ಗಳನ್ನು ಸ್ವಾಧೀನಪಡಿಸಲಾಗಿದ್ದು, ಸದ್ರಿ ಕಾನೂನು ಬಾಹಿರ ಕೃತ್ಯಕ್ಕೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದವರು ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದವರು ಸೇರಿ ಒಟ್ಟು 27 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 191/2025, ಕಲಂ: 189(2), 49, 221, 223, 190 BNS 2023 ಮತ್ತು 3, 11 PREVENTION OF CRUELTY TO ANIMALS ACT ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For the second consecutive day, Vitla Police conducted a raid at the annual Kepu Ullalthi Jatre, seized 20 roosters, and registered a case against 27 individuals, including several BJP leaders, for organising and promoting illegal cockfighting.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am