ಬ್ರೇಕಿಂಗ್ ನ್ಯೂಸ್
26-12-25 10:34 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ನಡೆಯುವ 9ನೇ ವರ್ಷದ ಮಂಗಳೂರು ಕಂಬಳದಲ್ಲಿ ಬ್ಯಾಕ್ ಟು ಊರು ಪರಿಕಲ್ಪನೆಯಡಿ ತಾಯ್ನಾಡಿಗೆ ವಾಪಾಸ್ಸಾಗಿ ಉದ್ಯಮ ಸ್ಥಾಪಿಸಿರುವ ಒಂಬತ್ತು ಉದ್ಯಮಿಗಳನ್ನು ಸನ್ಮಾನಿಸುವ ವಿಭಿನ್ನ ಕಾರ್ಯಕ್ರಮ ನಡೆಯಲಿದೆ.
ಈ ಬಾರಿ "ನವ ವಿಧ-ನವ ವರ್ಷ"ದ ಮಂಗಳೂರು ಕಂಬಳ ಆಗಿರುವ ಹಿನ್ನಲೆಯಲ್ಲಿ ತಾಯ್ನಾಡಿನ ಬಗೆಗಿನ ಅಪಾರ ಪ್ರೀತಿ ಮತ್ತು ಗೌರವದಿಂದ ಊರಿಗೆ ಮರಳಿ ತುಳುನಾಡಿನ ಮಣ್ಣಿನಲ್ಲೇ ಉದ್ಯಮವನ್ನು ಕಟ್ಟಿ ಬೆಳೆಸಿರುವ ನವ ಸಾಧಕ ಉದ್ಯಮಿಗಳನ್ನು ಗುರುತಿಸಿ ಅವರ ಕೊಡುಗೆಯನ್ನು ಶ್ಲಾಘಿಸಲಾಗುವುದು. ಆ ಮೂಲಕ ನಮ್ಮ ತುಳುನಾಡಿನ ಶ್ರೀಮಂತ ಜನಪದ ಕ್ರೀಡೆಯಾದ ಕಂಬಳದ ವೇದಿಕೆಯಲ್ಲೇ ಬ್ಯಾಕ್ ಟು ಊರು ಉದ್ದಿಮೆದಾರರನ್ನು ಸನ್ಮಾನಿಸುವ ಅವಿಸ್ಮರಣೀಯ ಕ್ಷಣಕ್ಕೆ ಈ ಬಾರಿಯ ಮಂಗಳೂರು ಕಂಬಳ ಸಾಕ್ಷಿಯಾಗಲಿದೆ.

ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದು ಅಪಾರ ಸಾಧನೆ ಮಾಡಿ, ತಾಯ್ನಾಡಿಗೆ ಬಂದು ಸ್ವಂತ ಉದ್ಯಮ ಸ್ಥಾಪಿಸಿ, ಇಲ್ಲಿನ ಇಕೋ ವ್ಯವಸ್ಥೆಗೆ ಪೂರಕವಾಗಿ ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ಮೂಲಕ ನಮ್ಮೂರ ಪ್ರಗತಿಯಲ್ಲಿ ಕೈಜೋಡಿಸಬೇಕೆಂಬ ಆಶಯದೊಂದಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ʼಬ್ಯಾಕ್ ಟು ಊರುʼ ಎನ್ನುವ ವಿಭಿನ್ನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಸಂಸದ ಕ್ಯಾ.ಚೌಟ ಅವರ ಈ ಬ್ಯಾಕ್ ಟು ಊರು ಪರಿಕಲ್ಪನೆಗೆ ದೇಶ- ವಿದೇಶಗಳಲ್ಲಿ ನೆಲೆಸಿರುವ ಹಲವಾರು ಉದ್ಯಮಿಗಳಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗುತ್ತಿದೆ.
ಸನ್ಮಾನ ಸ್ವೀಕರಿಸುವ 9 ಮಂದಿ ಸಾಧಕ ಉದ್ಯಮಿಗಳು
ಹುಟ್ಟೂರಿಗೆ ಮರಳಿ ವಿವಿಧ ಕ್ಷೇತ್ರಗಳಲ್ಲಿ ಉದ್ಯಮ ಸ್ಥಾಪಿಸಿರುವ ಮಂಗಳೂರು ಮೂಲದ ಉದ್ಯಮಿಗಳಾದ ಅವಿನಾಶ್ ರಾವ್, ಸ್ಮಿತಾ ರಾವ್, ಸುಧಾಕರ ಪೂಂಜ, ನಿತಿಕ್ ರತ್ನಾಕರ್, ಪ್ರಕಾಶ್ ಪಿರೇರ, ಆನಂದ್ ಫೆರ್ನಾಂಡಿಸ್, ಅನ್ಸಾಫ್ ಕಲ್ಲೇಜಿ, ಶ್ರೀಯಾ ಶೆಟ್ಟಿ ಹಾಗೂ ಸಂದೇಶ್ ಡಿ. ಪೂಜಾರಿ ಅವರನ್ನು ಸನ್ಮಾನಿಸಲಾಗುತ್ತಿದೆ. ಡಿ.27ರ ಬೆಳಗ್ಗೆ ಮಂಗಳೂರು ಕಂಬಳಕ್ಕೆ ಚಾಲನೆ ದೊರೆಯಲಿದ್ದು, ಇದೇ ವೇದಿಕೆಯಲ್ಲಿ ಈ ಸಾಧಕರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಗುತ್ತದೆ.
ನಮ್ಮ ಬ್ಯಾಕ್ ಟು ಊರು ಪರಿಕಲ್ಪನೆಯಂತೆ ತಮ್ಮ ಹುಟ್ಟೂರಿನ ಋಣ ತೀರಿಸಲು ಮಂಗಳೂರಿಗೆ ವಾಪಸ್ಸಾಗಿ, ಇಲ್ಲಿಯೇ ಉದ್ಯಮಗಳನ್ನು ಆರಂಭಿಸಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿರುವ 9 ಮಂದಿ ವಿಶಿಷ್ಟ ಉದ್ಯಮಿಗಳನ್ನು ಮಂಗಳೂರು ಕಂಬಳದ ವೇದಿಕೆಯಲ್ಲಿ ಸನ್ಮಾನಿಸಲಾಗುತ್ತಿದೆ. ಈ ಬಾರಿ 'ನವ ವರ್ಷ - ನವ ವಿಧ'ದ ಮಂಗಳೂರು ಕಂಬಳ ಆಗಿರುವ ಕಾರಣ ಬ್ಯಾಕ್ ಟು ಊರುʼ ಕಾರ್ಯಕ್ರಮವನ್ನು ಬೆಂಬಲಿಸಿರುವ ಒಂಬತ್ತು ಮಂದಿ ಉದ್ಯಮಿಗಳನ್ನು ಸನ್ಮಾನಿಸುತ್ತಿರುವುದು ಬಹಳ ಹೆಮ್ಮೆಯ ವಿಚಾರ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
The 9th edition of the Mangaluru Kambala, held at Bangrakooluru’s Gold Finch City under the leadership of MP Capt. Brijesh Chowta, will feature a special ceremony to honour nine entrepreneurs who returned to their homeland to establish successful ventures under the ‘Back to Uru’ initiative.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am