ಬ್ರೇಕಿಂಗ್ ನ್ಯೂಸ್
29-12-25 11:45 am Mangalore Correspondent ಕರಾವಳಿ
ಮಂಗಳೂರು, ಡಿ.29 : ನೈರುತ್ಯ ರೈಲ್ವೇ ಮೈಸೂರು ವಿಭಾಗದ ಘಾಟ್ ಸೆಕ್ಷನ್ನಲ್ಲಿ ಸಂಪೂರ್ಣ ವಿದ್ಯುದೀಕರಣ ಸಾಧಿಸಲಾಗಿದ್ದು ಡಿ.28ರಂದು ಈ ಭಾಗದ ಸಕಲೇಶಪುರ- ಸುಬ್ರಹ್ಮಣ್ಯ ಮಧ್ಯೆ ವಿದ್ಯುತ್ ಲೋಕೊಮೋಟಿವ್ ರೈಲನ್ನು ಪ್ರಾಯೋಗಿಕವಾಗಿ ಚಾಲನೆ ಮಾಡಲಾಯಿತು.
ನೈರುತ್ಯ ರೈಲ್ವೇ ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೇ ಪಾಲಿನ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿತ್ತು. ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258 ಸೇತುವೆಗಳು, 108 ಕಡಿದಾದ ತಿರುವುಗಳು ಇರುವುದಲ್ಲದೆ, ಭೂಕುಸಿತ ಸಾಧ್ಯತೆಯ ಪ್ರದೇಶವೂ ಆಗಿದೆ. ಹೀಗಾಗಿ ಈ ಭಾಗದಲ್ಲಿ ವಿದ್ಯುದೀಕರಣ ಕಾರ್ಯ ಅತ್ಯಂತ ಸಂಕೀರ್ಣವಾಗಿತ್ತು.
ಈ ಭಾಗದಲ್ಲಿ ವಿದ್ಯುದೀಕರಣ ಕಾರ್ಯವನ್ನು 2023ರ ಡಿಸೆಂಬರ್ 1ರಂದು ಆರಂಭಿಸಿದ್ದು ₹93.55 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಯೋಜನೆಯಡಿ ಈ ಮಾರ್ಗದಲ್ಲಿ ಐದು ಸ್ವಿಚಿಂಗ್ ಸ್ಟೇಷನ್‌ಗಳ ನಿರ್ಮಾಣ ಹಾಗೂ ಸಂಪೂರ್ಣ ವಿಭಾಗದಲ್ಲಿ ಮೇಲ್ಮೈ ವಿದ್ಯುದೀಕರಣ ಕಾರ್ಯ ಕೈಗೊಳ್ಳಲಾಗಿದೆ. ಮೇಲ್ಮೈ ವಿದ್ಯುತ್ ವ್ಯವಸ್ಥೆಯನ್ನು ಗರಿಷ್ಠ 120 ಕಿಮೀ ಪ್ರತಿ ಗಂಟೆ ವೇಗಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಿದ್ದು, ಎರಡು ವಿದ್ಯುತ್ ಕಂಬಗಳ ನಡುವಿನ ಗರಿಷ್ಠ ಅಂತರವನ್ನು 67.5 ಮೀಟರ್‌ಗೆ ಮಿತಿಗೊಳಿಸಲಾಗಿದೆ.
ಈ ಭಾಗದಲ್ಲಿರುವ 57 ಸುರಂಗಗಳಲ್ಲಿ, ಮೇಲ್ಮೈ ವಿದ್ಯುತ್ ಸಾಧನಗಳ ಅಳವಡಿಕೆಗೆ 419 ಮುಖ್ಯ ಬ್ರಾಕೆಟ್‌ಗಳು ಮತ್ತು 419 ಹೆಚ್ಚುವರಿ ಬ್ರಾಕೆಟ್‌ಗಳನ್ನು ಒದಗಿಸಲಾಗಿದೆ. ಸುರಂಗಗಳ ಲೈನ್ಡ್ ಹಾಗೂ ಅನ್ಲೈನ್ಡ್ ಭಾಗಗಳಿಗೆ ಸಂಬಂಧಿಸಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಭೌಗೋಳಿಕ ಸಮೀಕ್ಷೆಗಳನ್ನು ನಡೆಸಲಾಗಿದೆ.
ವಿದ್ಯುದೀಕರಣ ಕಾರ್ಯ ಮತ್ತು ವಿದ್ಯುತ್ ಲೋಕೊಮೋಟಿವ್ ಚಾಲನೆ ಯಶಸ್ವಿಯಾಗಿ ನಡೆದಿರುವುದರಿಂದ, ಸಂಪೂರ್ಣ ಘಾಟ್ ಭಾಗವು ಈಗ ವಿದ್ಯುತ್ ಚಾಲನೆಗೆ ಪೂರ್ಣವಾಗಿ ಸಿದ್ಧವಾಗಿದೆ. ಭಾರತೀಯ ರೈಲ್ವೆಯ ಶೇಕಡಾ 100 ವಿದ್ಯುದೀಕರಣ ಗುರಿಯತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.
The South Western Railway’s Mysuru Division has successfully completed the full electrification of the challenging 55-km Sakleshpur–Subrahmanya Road ghat section, marking a major milestone toward launching the Mangaluru–Bengaluru Vande Bharat Express. A trial run of an electric locomotive was conducted on December 28, proving the section’s readiness for electric traction.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm