ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ್ಯ, ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಪೊಲೀಸ್ ಕಮಿಷನರ್ ಸೂಚನೆ 

30-12-25 10:43 pm       Mangalore Correspondent   ಕರಾವಳಿ

2026ರ ಹೊಸ ವರ್ಷಾಚರಣೆ ನಡೆಸುವುದರ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ ವತಿಯಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. 

ಮಂಗಳೂರು, ಡಿ.30 : 2026ರ ಹೊಸ ವರ್ಷಾಚರಣೆ ನಡೆಸುವುದರ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ ವತಿಯಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. 

ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು/ಕಿರುಕುಳ ಆಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ.

ಸಂಭ್ರಮಾಚರಣೆ ಹೆಸರಿನಲ್ಲಿ ಅತೀ ವೇಗದ ವಾಹನ ಚಾಲನೆ, ವೀಲಿಂಗ್ ನಡೆಸುವುದು, ಅಸಭ್ಯ ವರ್ತನೆಯಂತಹ ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರ ಪರಿಗಣಿಸಲಾಗುವುದು.

ಮಂಗಳೂರು ನಗರದಾದ್ಯಂತ ಬಂದೋಬಸ್ತ್ ಕರ್ತವ್ಯದ ಬಗ್ಗೆ ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್‍ ಪೋಸ್ಟ್ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆ.ಎಸ್‍.ಆರ್‍.ಪಿ. ತುಕಡಿಗಳು, ಎಫ್‍.ಎ.ಎಫ್ ತುಕಡಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆಗೆ ಕರೆ ಮಾಡುವುದು. 112 ಸಂಖ್ಯೆ ಕರೆಗೆ ಲಭ್ಯವಾಗದೇ ಇದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mangaluru Police Commissioner Sudheer Reddy has announced that organizers and the public must strictly follow the guidelines issued for New Year 2026 celebrations. No public events will be allowed without prior police permission. Strict action will be taken against rash driving, wheeling, public nuisance, or indecent behavior.